w
Headlines
Home » ರೌಡಿಶೀಟರ್ ಹಿಡಿಯಲು ಬಂದ ಬೆಂಗಳೂರು ಸಿಸಿಬಿ ಪೊಲೀಸರನ್ನು ಕಂಡು ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡ ಆರೋಪಿ!

ರೌಡಿಶೀಟರ್ ಹಿಡಿಯಲು ಬಂದ ಬೆಂಗಳೂರು ಸಿಸಿಬಿ ಪೊಲೀಸರನ್ನು ಕಂಡು ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡ ಆರೋಪಿ!

JPEG 20261119 190924

ರೌಡಿಶೀಟರ್ ಹಿಡಿಯಲು ಬಂದ ಬೆಂಗಳೂರು ಸಿಸಿಬಿ ಪೊಲೀಸರನ್ನು ಕಂಡು ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡ ಆರೋಪಿ! | Rowdy-sheeter Sameer alias Bachchan allegedly attempted suicide by stabbing himself after spotting Bengaluru CCB police who arrived in Shivamogga to arrest him. He was admitted to McGann Hospital.

ಶಿವಮೊಗ್ಗ: ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಸಮೀರ್ ಅಲಿಯಾಸ್ ಬಚ್ಚನ್, ಬೆಂಗಳೂರು ಸಿಸಿಬಿ ಪೊಲೀಸರನ್ನು ಕಂಡು ತನ್ನ ಹೊಟ್ಟೆಗೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸಮೀರ್ ಅಲಿಯಾಸ್ ಬಚ್ಚನ್‌ನನ್ನು ವಶಕ್ಕೆ ಪಡೆಯಲು ಬೆಂಗಳೂರು ಸಿಸಿಬಿ ಪೊಲೀಸರ ತಂಡ ಶಿವಮೊಗ್ಗಕ್ಕೆ ಆಗಮಿಸಿತ್ತು. ಈ ವೇಳೆ ಪೊಲೀಸರನ್ನು ಕಂಡ ಆರೋಪಿ, ಬಂಧನದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ತನ್ನ ಬಳಿಯಿದ್ದ ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡಿದ್ದಾನೆ ಎನ್ನಲಾಗಿದೆ.

ಘಟನೆಯಿಂದ ಸಿಸಿಬಿ ಪೊಲೀಸರ ಕಾರ್ಯಾಚರಣೆ ವೇಳೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಗಾಯಗೊಂಡಿರುವ ಬಚ್ಚನ್‌ನನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಇರಿದುಕೊಂಡಿರುವ ಚಾಕು ದೇಹದೊಳಗೇ ಉಳಿದಿದ್ದು, ಅದನ್ನು ಹೊರತೆಗೆಯಲು ವೈದ್ಯರು ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಘಟನೆ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತಾ ಕಾರಣಗಳಿಂದ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.