ಕಾರು ಡಿಕ್ಕಿ – ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು! | A 65-year-old woman named Baby died after a speeding car hit her near 17th Mile in Shivamogga while she was walking home from work. The incident occurred under Malur Police Station limits.
ಶಿವಮೊಗ್ಗ: ರಸ್ತೆ ಬದಿಯಲ್ಲಿ ನಡೆದುಕೊಂಡು ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗದ 17ನೇ ಮೈಲಿಕಲ್ಲು ಬಳಿ ನಡೆದಿದೆ.
ಮೃತ ಮಹಿಳೆಯನ್ನು 17ನೇ ಮೈಲಿಕಲ್ಲು ನಿವಾಸಿ ಬೇಬಿ (65) ಎಂದು ಗುರುತಿಸಲಾಗಿದೆ.
ಬೇಬಿ ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅವರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯು ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
