w
Headlines
Home » ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ನಾಲ್ವರು ಯುವಕರು ನೀರುಪಾಲು; ಓರ್ವನ ಮೃತದೇಹ ಪತ್ತೆ, ಮುಂದುವರಿದ ಶೋಧ ಕಾರ್ಯ

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ನಾಲ್ವರು ಯುವಕರು ನೀರುಪಾಲು; ಓರ್ವನ ಮೃತದೇಹ ಪತ್ತೆ, ಮುಂದುವರಿದ ಶೋಧ ಕಾರ್ಯ

Screenshot 2026 11 26 19 45 50 763 com.openai.chatgpt edit

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ನಾಲ್ವರು ಯುವಕರು ನೀರುಪಾಲು; ಓರ್ವನ ಮೃತದೇಹ ಪತ್ತೆ, ಮುಂದುವರಿದ ಶೋಧ ಕಾರ್ಯ | Four youths from Bengaluru drowned while swimming in the Tunga River near the new bridge in Thirthahalli. One body has been recovered, while search operations continue for the remaining three.

ತೀರ್ಥಹಳ್ಳಿ: ತಾಲೂಕಿನ ತುಂಗಾ ನದಿಯ ಹೊಸ ಸೇತುವೆಯ ಕೆಳಭಾಗದಲ್ಲಿ ಈಜಾಡಲು ತೆರಳಿದ್ದ ಬೆಂಗಳೂರಿನ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ದುರಂತ ಸಂಭವಿಸಿದೆ. ಈಗಾಗಲೇ ಓರ್ವ ಯುವಕನ ಮೃತದೇಹ ಪತ್ತೆಯಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಬೆಂಗಳೂರಿನಿಂದ ಎರಡು ಟೆಂಪೋ ಟ್ರಾವೆಲರ್ ವಾಹನಗಳಲ್ಲಿ ಬಂದಿದ್ದ ಯುವಕರು ನದಿಗೆ ಇಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮಾಳೂರು ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿಗಳಾದ ಪುಲ್ಸಿಂಗ್ ಲಂಬಾಣಿ, ಸಂತೋಷ್, ಸಚಿನ್, ಶ್ರೀಧರ್, ಶಶಿಕುಮಾರ್ ಮತ್ತು ಅಲ್ತಾಫ್ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಸಾಮಾಜಿಕ ಕಾರ್ಯಕರ್ತ ಕುರುವಳ್ಳಿ ನಾಗರಾಜ್ ಹಾಗೂ ಅವರ ಗೆಳೆಯರ ತಂಡ, ಶಿವಮೊಗ್ಗದ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಅವರ ಮಾರ್ಗದರ್ಶನದಲ್ಲಿ ಆಗಮಿಸಿದ ಯುವಕರ ತಂಡ ಮತ್ತು ಸ್ಥಳೀಯ ಗ್ರಾಮಸ್ಥರು ಕಾರ್ಯಾಚರಣೆಗೆ ಕೈಜೋಡಿಸಿದ್ದಾರೆ.

ಉದಯಪುರ, ಮೈಸಿ ಹಾಗೂ ದಬ್ಬಣಗದ್ದೆಯ ಯುವಕರು ಕೂಡ ಶೋಧ ಕಾರ್ಯಕ್ಕೆ ಸಹಕಾರ ನೀಡುತ್ತಿದ್ದಾರೆ. ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರ ಸಹಯೋಗದಲ್ಲಿ ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.