POSTMAN NEWS

ನೈಜ ಸುದ್ದಿ ನೇರ ಬಿತ್ತರ..

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ
ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್ ಎನ್ ಮಂಜಪ್ಪ ರವರ ನಿಧನದ ಹಿನ್ನಲೆ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು.

ಪಟ್ಟಣದ ಮೃತರ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ನಂತರ ಮಾತನಾಡಿ ರೈತ ಚಳವಳಿಗಳ ನಾಯಕ ಹಿರಿಯ ವ್ಯಕ್ತಿತ್ವವಾದ ಆರ್ ಎನ್ ಮಂಜಪ್ಪ ನವರು ನಮ್ಮನ್ನು ಅಗಲಿರುವುದು ಅತೀವ ದುಃಖದ ಸಂಗತಿಯಾಗಿದೆ.




ಕಳೆದ 6 ದಶಕಗಳಿಂದ ರೈತ ಪರ ಹೋರಾಟಗಳಲ್ಲಿ ತೊಡಗಿಕೊಂಡಿದ್ದ, ಪ್ರಾಂತ ರೈತ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಉಪಾಧ್ಯಕ್ಷರು ಆಗಿದ್ದ ಆರ್ ಎನ್ ಮಂಜಪ್ಪ ಅವರ ನಿಧನದಿಂದ ರೈತ ಪರ ಧ್ವನಿಯೊಂದನ್ನು ಕಳೆದುಕೊಂಡಿದ್ದೇವೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು, ಭಗವಂತನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಈ ಸಂಧರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.




Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.