ತೀರ್ಥಹಳ್ಳಿ : ಪಟ್ಟಣದ ತುಂಗಾ ಸೇತುವೆ ಸಮೀಪದ ಸರ್ಕಾರಿ ಕಚೇರಿಯ ಹೊರ ಭಾಗದಲ್ಲಿ ಗುರುವಾರ ಬೆಳಗ್ಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ನಾಗರಾಜ್(56) ಎಂದು ಗುರುತಿಸಲಾಗಿದೆ.
ಕಮ್ಮರಡಿ ಮೂಲದವರು ಎಂಬುದಾಗಿ ತಿಳಿದು ಬಂದಿದ್ದು, ನಾಗರಾಜು ಅವರು ಎನ್ ಆರ್ ಪುರ ಭಾಗದಲ್ಲಿ ಖಾಸಗಿ ಬಸ್ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.