Headlines

ಭಾರಿ ಮಳೆಯ ಹಿನ್ನಲೆ – ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಣೆ|Rain

ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ರವರ ಸೂಚನೆ ಮೇರೆಗೆ ಜು. 24 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

 ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು (ಆಡಳಿತ), ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *