ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಚರಂಡಿಗೆ ಉರುಳಿದ ಘಟನೆ ನಡೆದಿದೆ.
ರಿಪ್ಪನ್‌ಪೇಟೆ ಕಡೆಯಿಂದ ಶಿವಮೊಗ್ಗದತ್ತ ತೆರಳುತಿದ್ದ KSRTC ಬಸ್ ಸೂಡೂರು ಗೇಟ್ ಬಳಿಯಲ್ಲಿ ವಾಹನವೊಂದನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ ಉರುಳಿಬಿದ್ದಿದೆ ಎನ್ನಲಾಗುತ್ತಿದೆ.ಈ ಅಪಘಾತದಲ್ಲಿ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ
ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾರಿಗೂ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿರುವುದಿಲ್ಲ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.