ಭಾರತೀಯರ ಹೆಮ್ಮೆಯ ಪ್ರತೀಕವಾದ ಬಹುನಿರೀಕ್ಷಿತ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ. ಇಂದು ಮಧ್ಯಾಹ್ನ 2.35ಕ್ಕೆ ಸರಿಯಾಗಿ ಚಂದ್ರಯಾನ ಉಡಾವಣೆ ಮಾಡಲಾಯಿತು.
ಉಡಾವಣೆ ಯಶಸ್ವಿಯಾಗುತ್ತಲೇ ಇಸ್ರೋ ವಿಜ್ಞಾನಿಗಳು ಹಾಗೂ ನೆರೆದಿದ್ದ ಸಾವಿರಾರು ಮಂದಿಯಿಂದ ಸಂಭ್ರಮದ ಹರ್ಷೋದ್ಘಾರ, ಭರ್ಜರಿ ಕರತಾಡನ ಕೇಳಿಬಂದಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಚಂದ್ರಯಾನ-3 ಉಡಾವಣೆ ಮಾಡಲಾಯಿತು. ಯಶಸ್ವಿ ಲ್ಯಾಂಡಿಂಗ್ ಆದರೆ ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಈ ಸಾಧನೆಯನ್ನು ಮಾಡಿದ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಲಿದೆ.
ಚಂದ್ರಯಾನ-3ನ್ನು 615 ಕೋಟಿ ರೂಪಾಯಿ ಮೊತ್ತದಲ್ಲಿ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಲ್ಯಾಂಡರ್ ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್‌ಗೆ ಸುಮಾರು 250 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಉಡಾವಣೆಗೆಂದೇ 365 ಕೋಟಿ ರೂಪಾಯಿ ಖರ್ಚಾಗಿದೆ.