POSTMAN NEWS

ನೈಜ ಸುದ್ದಿ ನೇರ ಬಿತ್ತರ..

ತೀರ್ಥಹಳ್ಳಿ ಪಟ್ಟಣದ ಮಧ್ಯ ಭಾಗದಲ್ಲೇ ವೇಶ್ಯಾವಾಟಿಕೆ : ತಡರಾತ್ರಿ ದಾಳಿ,ಮೂವರು ಮಹಿಳೆಯರ ರಕ್ಷಣೆ – ಹಲವರ ಬಂಧನ..??|TTH

ತೀರ್ಥಹಳ್ಳಿ: ರಾಜ್ಯಾದ್ಯಂತ ಸುದ್ದಿಯಾಗಿದ್ದ ಎಬಿವಿಪಿ ಅಧ್ಯಕ್ಷನ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಗೌಡನ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ.




ಇದರ ನಡುವೆ ತೀರ್ಥಹಳ್ಳಿ ಪಟ್ಟಣದಲ್ಲಿ ಮತ್ತೊಂದು ವೇಶ್ಯಾವಾಟಿಕೆ ದಂಧೆ ಬುಧವಾರ ರಾತ್ರಿ ಬಯಲಾದ ಬಗ್ಗೆ ಮೂಲಗಳು ತಿಳಿಸಿವೆ.


ಸಿಟಿ ಮದ್ಯದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಿದ ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.




ಆದರೆ ಪೊಲೀಸರಿಂದ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಮಹಿಳೆಯರು ಬೆಂಗಳೂರು ಮತ್ತು ಶಿವಮೊಗ್ಗ ಮೂಲದವರು ಎನ್ನಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ರಾತ್ರೋ ರಾತ್ರಿ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.