ಶಿವಮೊಗ್ಗ ನಗರದಲ್ಲಿ ನಡೆದ ನೂತನ ಸಚಿವ ಮಧು ಬಂಗಾರಪ್ಪರಿಗೆ ಸ್ವಾಗತ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಜಿಲ್ಲೆಯಲ್ಲಿನ ಅಧಿಕಾರಿಗಳ ಪೈಕಿ ಕೆಲವರು ಬಿಜೆಪಿ ಮನಸ್ಥಿತಿಯವರು ಇದ್ದಾರೆ, ಅಂತವರನ್ನ ಕಿತ್ತುಹಾಕಬೇಕಿದೆ ಎಂದರು.
ಅಲ್ಲದೆ, ಜಿಲ್ಲೆಯಲ್ಲಿ ಸಂಸದರು ಹೇಳಿದ ಹಾಗೆ ಕೇಳುವ ಅವರಿಗೆ ಸಹಕಾರ ನೀಡುವ ಅಧಿಕಾರಿಗಳಿದ್ದು, ಈ ಹಿಂದೆ ಹಲವರು ಅವರ ಚೇಲಾಗಳ ರೀತಿಯಲ್ಲಿ ಕೆಲಸ ಮಾಡಿದ ಉದಾಹರಣೆಯಿದೆ, ಅಂತಹವರನ್ನ ವರ್ಗಾವಣೆ ಮಾಡಬೇಕಿದೆ ಎಂದರು.
ದರಿದ್ರ ಬಿಜೆಪಿ ಸರ್ಕಾರವನ್ನು ಕಿತ್ತು ಬಿಸಾಕಿದ್ದಕ್ಕೆ ಸಂತಸವಾಗುತ್ತಿದೆ. ಜಿಲ್ಲೆಯಲ್ಲಿ ಸಾಕಷ್ಟು ಸವಾಲುಗಳಿವೆ. ಅವುಗಳನ್ನ ಸಮರ್ಥವಾಗಿ ಎದುರಿಸಲು, ನಾವು ಮಧು ಬಂಗಾರಪ್ಪರವರ ಜೊತೆಗಿದ್ದೇವೆ ಎಂದು ಸಹಮತ ವ್ಯಕ್ತಪಡಿಸಿದರು. ಅಲ್ಲದೆ ಮಧು ಬಂಗಾರಪ್ಪನವರು ಮಂತ್ರಿಯಾಗಿರುವುದು ತಮಗೆ ಸಂತಸ ತಂದಿದೆ ಎಂದರು.
ರಾಜ್ಯದ ಜನರು ಕಾಂಗ್ರೆಸ್ ಗೆ ಸ್ಪಷ್ಟ ಬಹುಮತವನ್ನು ನೀಡಿದ್ದಾರೆ, 136 ಸ್ಥಾನವನ್ನು ನೀಡಿದ್ದು ಯಡಿಯೂರಪ್ಪ ಮುಖ್ಯಮಂತ್ರಿ ಯಾಗುತ್ತಾರೆ ಎಂದರೂ ಸಹ ಇಷ್ಟೊಂದು ಬಹುಮತವನ್ನು ನೀಡುತ್ತಿರಲಿಲ್ಲ ಎಂದು ಪರೋಕ್ಷವಾಗಿ ಬಿಜೆಪಿಯನ್ನು ವ್ಯಂಗ್ಯವಾಡಿದ್ರಷ್ಟೆ ಅಲ್ಲದೆ, ಕಾಂಗ್ರೆಸ್ನ ಸಾಮರ್ಥ್ಯವನ್ನು ಶ್ಲಾಘಿಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್