ಜಿಲ್ಲೆಯಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರೀ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಶಿವಮೊಗ್ಗ ನಗರದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಶಿವಮೊಗ್ಗ ನಗರದ ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ವಾಸಿಸುತ್ತಿದ್ದಂತ ಲಕ್ಷ್ಮೀಬಾಯಿ(28) ಎಂಬುವರು ಇಂದು ಕುರಿಗಳಿಗೆ ಮೇವು ತರಲು ಹೋಗಿದ್ದರು. ಈ ವೇಳೆ ಸಿಡಿಲು ಬಡಿದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಮರಗಳು ಬಿದ್ದು ರಸ್ತೆ ಸಂಚಾರ ಕೂಡ ಬಂದ್ ಆಗಿರುವಂತ ಘಟನೆ ನಡೆದಿದೆ.
ಈ ವಿಷಯ ತಿಳಿದಂತ ವಿನೋಬ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.