ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂಸದ ಡಿ.ಕೆ ಸುರೇಶ್ ಅವರ ದೆಹಲಿ ನಿವಾಸ ಕಾವೇರಿಯಲ್ಲಿ ಶಾಸಕರು ಹಾಗೂ ಆಪ್ತರ ಜತೆ ಸಮಾಲೋಚನೆ ನಡೆಸುತ್ತಿದ್ದಾರೆ.
ಶಾಸಕರಾದ ಬೇಳೂರು ಗೋಪಾಲಕೃಷ್ಣ ಮತ್ತು ಕೆಪಿಸಿಸಿ ಸಹಕಾರ ವಿಭಾಗದ ಕಾರ್ಯಾಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ, ಸಿ.ಕೆ ವೀರೇಂದ್ರ ಪಪ್ಪಿ, ಡಾ.ರಂಗನಾಥ್, ಎಚ್.ಸಿ ಬಾಲಕೃಷ್ಣ, ಇಕ್ಬಾಲ್ ಹುಸೇನ್. ಪರಿಷತ್ ಸದಸ್ಯ ಎಸ್.ರವಿ ಸೇರಿ ಕೆಲವು ಆಪ್ತರ ಜೊತೆ ಡಿ.ಕೆ ಶಿವಕುಮಾರ್ ಸಮಾಲೋಚನೆ ನಡೆಸುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಹಿನ್ನೆಲೆ ಹೈಕಮಾಂಡ್ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್