ರಿಪ್ಪನ್ಪೇಟೆ : 2022 23ನೇ ಸಾಲಿನ ಎಸ್ ಎಸ್
ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ.
ಸತತವಾಗಿ 7 ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 32 ವಿದ್ಯಾರ್ಥಿಗಳು ಪರೀಕ್ಷೆಗೆ
ಕುಳಿತಿದ್ದು, ಅತ್ಯುನ್ನತ ಶ್ರೇಣಿಯಲ್ಲಿ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪೋಷಕರಿಗೂ ಹಾಗೂ ಶಿಕ್ಷಣ ಸಂಸ್ಥೆಯವರಿಗೆ ಹೆಮ್ಮೆಯನ್ನು ತಂದಿರುತ್ತಾರೆ.
ರಾಮಕೃಷ್ಣ ಶಾಲೆಯ ವಿದ್ಯಾರ್ಥಿನಿ ಇಂಪನ ಬಿ ಟಿ 625ಕ್ಕೆ 611(98%) ಅಂಕ ಗಳಿಸಿದ್ದಾಳೆ.ಇವರು ಬಸವಾಪುರದ ಕಂಬದಮನೆಯ ನಿವಾಸಿ ತೀರ್ಥೇಶ್ ಮತ್ತು ಗೀತಾ ದಂಪತಿಗಳ ಪುತ್ರಿಯಾಗಿದ್ದಾರೆ.
ಕುಮಾರಿ ದಾತ್ರಿ 625ಕ್ಕೆ 607(97.12%) ಅಂಕ ಗಳಿಸಿದ್ದು,ಇವರು ಪಟ್ಟಣದ ಸಮೀಪದ ಗವಟೂರು ನಿವಾಸಿ ಕೃಷ್ಣಮೋಹನ್ ಮತ್ತು ರಾಜೇಶ್ವರಿ ದಂಪತಿಗಳ ಪುತ್ರಿಯಾಗಿದ್ದಾರೆ.
ಕುಮಾರಿ ಇಂಚರ ಬಿ ಟಿ 625ಕ್ಕೆ 599 ಅಂಕ ಗಳಿಸಿದ್ದು,ಇವರು ಪಟ್ಟಣದ ವಿನಾಯಕ ನಗರ ನಿವಾಸಿ ತಿಮ್ಮಪ್ಪ ಮತ್ತು ಜಯಲಕ್ಷ್ಮಿ ದಂಪತಿಗಳ ಪುತ್ರಿಯಾಗಿದ್ದಾರೆ.
ರಾಮಕೃಷ್ಣ ಶಾಲೆಗೆ ಶೇಕಡಾ100% ಫಲಿತಾಂಶ ತಂದುಕೊಟ್ಟು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಮತ್ತು ಪೋಷಕ ವೃಂದ ಅಭಿನಂದಿಸಿ ಶುಭ ಹಾರೈಸಿದೆ.
SSLC ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ವತಿಯಿಂದ ಅಭಿನಂದನೆಗಳು…….
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್