ರಿಪ್ಪನ್ಪೇಟೆ ಕಾಲೇಜ್ಗೆ ಪಿಯು ಪರೀಕ್ಷೆಯಲ್ಲಿ ಶೇಕಡಾ 81.96 ರಷ್ಟು ಫಲಿತಾಂಶ
ರಿಪ್ಪನ್ಪೇಟೆ : ಕಳೆದ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್ಗೆ ಶೇಕಡಾ 81.96 ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜ್ ಪ್ರಾಚಾರ್ಯ ಎ.ಮಂಜುನಾಥ ತಿಳಿಸಿದರು.
ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 244 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 200 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ.
ಕಲಾ ವಿಭಾಗದಲ್ಲಿ 101 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ ಮೂಲಕ ಶೇಕಡಾ 79.20 ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗದಲ್ಲಿ 82 ವಿದ್ಯಾರ್ಥಿಗಳಲ್ಲಿ 66 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ ಮೂಲಕ ಶೇಕಡಾ 80-48 ರಷ್ಟು ಫಲಿತಾಂಶ.ವಿಜ್ಞಾನ ವಿಭಾಗದಲ್ಲಿ 61 ವಿದ್ಯಾರ್ಥಿಗಳಲ್ಲಿ 54 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ ಮೂಲಕ ಶೇಕಡಾ 88.52 ರಷ್ಟು ಫಲಿತಾಂಶ ಬಂದಿದೆ ಎಂದರು
17 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ.101 ಪ್ರಥಮದರ್ಜೆಯಲ್ಲಿ,45 ವಿದ್ಯಾಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 37 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣಾರಾಗುವ ಮೂಲಕ ಕಾಲೇಜ್ಗೆ ಕೀರ್ತಿ ತಂದಿದ್ದಾರೆAದು ಹೇಳಿ ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಚಾರ್ಯರು ಮತ್ತು ಉಪನ್ಯಾಸಕ ವೃಂದ ಸಿಡಿಸಿ ಯವರು ಆಭಿನಂದಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ಶುಭಾಶಯವನ್ನು ಕೋರುತ್ತದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್