ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಸಮೀಪದಲ್ಲಿ ಇರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ವಿಶ್ವಕರ್ಮ ಸಮುದಾಯ ಮುಖಂಡರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕರೆಸಿ ಸಭೆಯನ್ನು ಹಮ್ಮಿಕೊಂಡಿದ್ದರು.ಈ ಸಭೆಯಲ್ಲಿ ನೂರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.
ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಚುನಾವಣೆಯ ನಿಯಮಾವಳಿಯ ಅನುಸಾರ ಚುನಾವಣಾ ಅಧಿಕಾರಿಗಳಿಂದ ಈ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕಾಗಿತ್ತು.
ಆದರೆ ಮಂಗಳವಾರ ಸಮುದಾಯ ಭವನದಲ್ಲಿ ನಡೆಯಬೇಕಿದ್ದ ಸಭೆಗೆ ಚುನಾವಣ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಚುನಾವಣಾ ಅಧಿಕಾರಿಗಳು ದಿಡಿರ್ ದಾಳಿ ನೆಡೆಸಿ ಕಾರ್ಯಕ್ರಮವನ್ನು ನಿಲ್ಲಿಸಿದರು.