w
Headlines
Home » ಶಿವಮೊಗ್ಗ – ಹರಕೆರೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ಕೋಟ್ಯಾಂತರ ರೂ ವಶ|election

ಶಿವಮೊಗ್ಗ – ಹರಕೆರೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ಕೋಟ್ಯಾಂತರ ರೂ ವಶ|election


Shivamogga ಮಾ.31: ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಹರಕೆರೆ ಚೆಕ್ ಪೋಸ್ಟ್ ನಲ್ಲಿ 1 ಕೋಟಿ 39 ಲಕ್ಷ ರೂ ನಗದು ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನಲೆ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದಿದ್ದು, ವಾಹನಗಳನ್ನು ತಪಾಸಣೆ ನಡೆಸುತ್ತಿರುವ ವೇಳೆ ಯಾವುದೇ ದಾಖಲೆಯಿಲ್ಲದೆ ಹರಕೆರೆ ಚೆಕ್ ಪೋಸ್ಟ್ ನಲ್ಲಿ ಸಾಗಿಸುತ್ತಿದ್ದ ಬೊಲೆರೋ ವಾಹನದಲ್ಲಿ 1 ಕೋಟಿ 39 ಲಕ್ಷ ರೂ. ಹಣ ಪತ್ತೆಯಾಗಿದೆ.

ಕಾರು ತಪಾಸಣೆ ನಡೆಸಿದಾಗ 1 ಕೋಟಿ ರೂ. ನಗದು ಹಣ ಪತ್ತೆಯಾಗಿದ್ದು, ತಕ್ಷಣ ಹಣ ಮತ್ತು ರವಿ ಮುಡಬೂಳನನ್ನ ಚುನಾವಣಾಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. 



ಬ್ಯಾಂಕ್ ನ  ಎಟಿಎಂಗಳಿಗೆ ಹಣ ಹಾಕುವ ವಾಹನದಲ್ಲಿ ಈ ಹಣ ಪತ್ತೆಯಾಗಿದೆ.  ಕೆಎ 01 ಎಕೆ 7710 ವಾಹನದಲ್ಲಿ ಈ ಹಣ ಸಾಗಿಸುತ್ತಿದ್ದ ವೇಳೆ ಹಣ ಪತ್ತೆಯಾಗಿದೆ. 

ಪತ್ತೆಯಾದ ಹಣಕ್ಕೆ ಯಾವುದೇ ದಾಖಲಾತಿ ಪತ್ತೆಯಾಗದ ಹಿನ್ನಲೆಯಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.



Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.