* ಹಾಲ್ ಟಿಕೆಟ್, ಕಾಲೇಜ್ ಐಡಿ ಕಾರ್ಡ್ ಯಾವುದೇ ಕಾರಣಕ್ಕೂ ಮರೆಯಬೇಡಿ. ಪರೀಕ್ಷೆಗೆ ಬೇಕಾದ ಪೆನ್ಸಿಲ್, ರಬ್ಬರ್, 2-3 ಪೆನ್ ಹಾಗೂ ಇತರ ಸಲಕರಣೆಗಳು ಇವೆಯೇ ಎಂದು ಪರೀಕ್ಷಿಸಿಕೊಳ್ಳಿ. ಸಾಧ್ಯವಾದರೆ ಹಿಂದಿನ ದಿನವೇ ಬ್ಯಾಗಿನಲ್ಲಿ ಇದನ್ನೆಲ್ಲಾ ಹಾಕಿ ಸಿದ್ದಪಡಿಸಿಟ್ಟುಕೊಳ್ಳಿ.
* ನಿಮ್ಮ ರಿಜಿಸ್ಟರ್ ನಂಬರ್ ಬರೆದ ಜಾಗದಲ್ಲೇ ಕುಳಿತುಕೊಳ್ಳಿ. ಪರೀಕ್ಷೆ ಹಾಲಿಗೆ ಕನಿಷ್ಟ ಅರ್ಧ ಗಂಟೆ ಮೊದಲು ತಲುಪಿ. ತಡವಾದರೂ ಚಿಂತೆ ಬೇಡ. ನಿಯಮಗಳ ಪ್ರಕಾರ 9.45ರವರೆಗೆ ಪರೀಕ್ಷಾ ಕೊಠಡಿಗೆ ಪ್ರವೇಶ ಪಡೆಯಲು ನಿಮಗೆ ಅವಕಾಶವಿದೆ.
* ಗೊತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ. ಗೊತ್ತಿಲ್ಲದ ಪ್ರಶ್ನೆಗಳಿಗೆ ಸಮಯ ಉಳಿದರೆ ಕೊನೆಯಲ್ಲಿ ಉತ್ತರಿಸುವ ಪ್ರಯತ್ನ ಮಾಡಿ.
* ಪ್ರಶ್ನೆ ಪತ್ರಿಕೆಯಲ್ಲಿರುವ ಪ್ರಶ್ನೆಗಳನ್ನು ವಿವರವಾಗಿ ಓದಿ ಅರ್ಥೈಸಿಕೊಳ್ಳಿ. ಪ್ರಶ್ನೆ ಪತ್ರಿಕೆಯಲ್ಲಿರುವ ಸೂಚನೆಗಳನ್ನು ಸರಿಯಾಗಿ ಓದಿ ಪಾಲಿಸಿ.
* ಉತ್ತರ ಪತ್ರಿಕೆಯ ಮೇಲೆ ನಿಮ್ಮ ಹಾಲ್ ಟಿಕೆಟ್ ನಂಬರನ್ನು ಸರಿಯಾಗಿ ನಮೂದಿಸಿ. ಈ ಬಾರಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಬೇರೆ ಬೇರೆಯಾಗಿರುವುದರಿಂದ ಪ್ರಶ್ನೆಗಳ ಸಂಖ್ಯೆಯನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ನಮೂದಿಸಿ.[ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ]
* ಪರೀಕ್ಷೆಯ ಹಿಂದಿನ ದಿನ ರಾತ್ರಿ ಇಡೀ ಓದಿ ನಿದ್ದೆ ಬಿಡಬೇಡಿ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.
* ಯಾವುದೇ ಕಾರಣಕ್ಕೂ ಕಾಪಿ ಮಾಡುವ ಪ್ರಯತ್ನಗಳಿಗೆಲ್ಲಾ ಕೈ ಹಾಕಿ ಇಕ್ಕಟ್ಟಿಗೆ ಸಿಲುಕಿಕೊಳ್ಳಬೇಡಿ. ಫೇಲ್ ಆದರೂ ಪರವಾಗಿಲ್ಲ, ಸಪ್ಲಿಮೆಂಟರಿ ಪರೀಕ್ಷೆ ಬರೆದು ಪಾಸ್ ಆಗಬಹುದು. ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರಕ್ಕೆ ನಿರ್ಬಂಧಿತ ವಸ್ತುಗಳನ್ನು ಮಾತ್ರ ತೆಗೆದುಕೊಂಡು ಹೋಗಲೇಬೇಡಿ.
* ಆಹಾರವನ್ನು ಸರಿಯಾಗಿ ಸೇವಿಸಿ. ಆರೋಗ್ಯದ ಮೇಲೆ ಪರಿಣಾಮ ಬೀರುವ ಆಹಾರಗಳಿಂದ ಆದಷ್ಟು ದೂರವಿರಿ. ಯಾವುದೆ ಕಾರಣಕ್ಕೂ ಟೆನ್ಶನ್ ಮಾಡಿಕೊಳ್ಳಬೇಡಿ. ಒತ್ತಡದಲ್ಲಿ ಮರೆತು ಹೋಗುವ ಸಾಧ್ಯತೆಗಳು ಜಾಸ್ತಿಯಾಗಿರುತ್ತವೆ.
* ಕೊನೆಯ 10 ನಿಮಿಷಗಳನ್ನು ಉಳಿಸಿಕೊಂಡು ಬರೆದ ಉತ್ತರ, ರಿಜಿಸ್ಟರ್ ನಂಬರ್ ಸರಿಯಾಗಿದೆಯೇ ಎಂದು ಮರು ಪರೀಕ್ಷಿಸಿಕೊಳ್ಳಿ.
ಎಸ್.ಎಸ್.ಎಲ್‍ಸಿ. ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಇರುವ ಪೊಲೀಸ್ ಸಿಬ್ಬಂದಿ ನೇಮಕ ಮಾಡಬೇಕು. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಹೊರಡಿಸಲಾಗಿರುತ್ತದೆ. ಪರೀಕ್ಷೆ ಬರೆಯವ ವಿದ್ಯಾರ್ಥಿ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿಗಳನ್ನು ಹೊರತು ಪಡೆಸಿ ಅನ್ಯರು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವಂತಿಲ್ಲ. ನಕಲು ಹಾಗೂ ಇತರೆ ಅಕ್ರಮಗಳು ನಡೆಯದಂತೆ ಕಡಿವಾಣ ಹಾಕಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌರ್ಯಗಳ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಪೋನ್, ಸ್ಮಾರ್ಟ್ ಫೋನ್ ಹಾಗೂ ಎಲೆಕ್ಟ್ರಿಕಲ್ ವಸ್ತುಗಳನ್ನು ಕೊಂಡಯ್ಯಲು ಅವಕಾಶವಿಲ್ಲ. ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ಕೊಠಡಿಯಲ್ಲೂ ಗಡಿಯಾರ ಇರಬೇಕು.
ವಿದ್ಯಾರ್ಥಿಗಳು ಸಮವಸ್ತ್ರಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಿದ್ದು, ಹಿಜಾಬ್ ಧರಿ ಬಂದರೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ. ಕನಿಷ್ಟ ಒಂದು ಗಂಟೆಗೂ ಮೊದಲೇ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದ ಜತೆಗೆ ತೆರಳಿ ಪರೀಕ್ಷಾ ಕೊಠಡಿಯನ್ನು ಹುಡಿಕಿಕೊಳ್ಳಬೇಕಿದೆ.
KSRTC-BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಈಗಾಗಲೇ ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ದಿನಗಳಂದು ತನ್ನ ಸಾರಿಗೆ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿತ್ತು. ಈಗ ಮುಂದುವರೆದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೂ ಪರೀಕ್ಷೆಯಂದು( Karnataka SSLC Main Exam 2023 ) ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ.
ಈ ಬಗ್ಗೆ ಕೆ ಎಸ್ ಆರ್ ಟಿ ಸಿಯಿಂದ ಸುತ್ತೋಲೆ ಹೊರಡಿಸಿದ್ದು, 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ( SSLC Exam 2023 ) ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಿದೆ. ಅಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ( SSLC Students ) ಪರೀಕ್ಷಾ ಕೇಂದ್ರಕ್ಕೆ ತೆರಳಲು ಉಚಿತ ಅವಕಾಶ ನೀಡುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೋರಿದ್ದಾರೆ ಎಂದಿದೆ.
ಈ ಹಿನ್ನಲೆಯಲ್ಲಿ ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ 2022-23ನೇ ಸಾಲಿನಲ್ಲಿ ಪರೀಕ್ಷೆ ನಡೆಯುವ ದಿನಾಂಕಗಳಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಪರವೇಶ ಪತ್ರವನ್ನು ತೋರಿಸಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಮತ್ತು ವಾಪಾಸ್ಸು ಮರಳಲು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಕೇಂದ್ರಕ್ಕೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ( Admit Card ) ಉಚಿತವಾಗಿ ಪ್ರಯಾಣವನ್ನು ಅನುಮತಿಸುವಂತೆ ನಿಗಮದ ಎಲ್ಲಾ ಚಾಲಕ, ನಿರ್ವಾಹಕರುಗಳಿಗೆ ಸೂಚಿಸಿದೆ.