ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ.
ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ ಪ್ರಾಣಿ ಸಂಕುಲಗಳ ಮಾರಣಹೋಮಕ್ಕೆ ಕಾರಣವಾಗಿದ್ದಾರೆ.
ವಿಷ ಬೆರೆಸಿದ್ದರಿಂದ ಮೀನು,ಕಪ್ಪೆ ಹಾಗೂ ಇನ್ನಿತರ ಜೀವಿಗಳು ನದಿಯ ದಂಡೆಯ ಮೇಲೆ ಬಿದ್ದಿದ್ದು.ಇದನ್ನೂ ತಿನ್ನುವ ಹಕ್ಕಿಗಳು ಸಹ ಸಾಯುವ ಸಾಧ್ಯತೆ ಇರುತ್ತದೆ.ಇನ್ನೂ ಜಾನುವಾರುಗಳು ಕುಡಿಯಲು ಇದೇ ನೀರು ಬಳಸುವುದರಿಂದ ಅವುಗಳ ಜೀವಕ್ಕೂ ಕಂಠಕವಾಗಿದೆ.
ಈ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯಿಂದ ದೂರವಾಣಿ ಮೂಲಕ ಅಮೃತ ಗ್ರಾಪಂ ಪಿಡಿಒ ರವರಿಗೆ ಘಟನೆಯ ಬಗ್ಗೆ ಮಾಹಿತಿ ಕೇಳಿದಾಗ ಈ ಬಗ್ಗೆ ಗಮನಕ್ಕೆ ಬಂದಿದ್ದು ತಪ್ಪಿತಸ್ಥ ಕಿಡಿಗೇಡಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಒಟ್ಟಾರೆಯಾಗಿ ಮೀನುಗಳ ಮಾರಣಹೋಮ ನಡೆಸಿರುವ ಕಿಡಿಗೇಡಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವುದರೊಂದಿಗೆ ಜಾನುವಾರುಗಳು ಹೊಳೆಯ ವಿಷಯುಕ್ತ ನೀರು ಕುಡಿಯದಂತೆ ತಡೆಯುವ ಕೆಲಸವನ್ನು ಅಮೃತ ಗ್ರಾಮಾಡಳಿತ ಮಾಡಬೇಕಾಗಿದೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್