ಶಿವಮೊಗ್ಗ ಜಿಲ್ಲೆಯ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಏಳು ಜನ ಆಕಾಂಕ್ಷಿಗಳು ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದರು ಅದರಲ್ಲಿ ಹಿರಿಯ ಮುತ್ಸದಿ ಕಾಗೋಡು ತಿಮ್ಮಪ್ಪ ಹಾಗೂ ಅವರ ಮಗಳು ಡಾ.ರಾಜನಂದಿನಿ ಪ್ರಬಲ ಆಕಾಂಕ್ಷಿಯಾಗಿದ್ದರು.
ಕೊನೆಯಲ್ಲಿ ಹೈಕಮಾಂಡ್ ಪಕ್ಷದ ಆಂತರಿಕ ಸಮೀಕ್ಷೆಗೆ ಮನ್ನಣೆ ನೀಡಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರನ್ನು ಹೈಕಮಾಂಡ್ ಅಂತಿಮಗೊಳಿಸಿದ್ದು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿಸಿತ್ತು.
ಆದರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಬಣಗಳಿವೆ ಇದರಿಂದ ಬೇಳೂರು ಚುನಾವಣೆಯಲ್ಲಿ ಹಿನ್ನಡೆ ಸಾಧಿಸುವ ಸಾಧ್ಯತೆ ಇದೆ ಎನ್ನಲಾಗುತಿತ್ತು ಆದರೆ ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಮುತ್ಸದಿ ನಾಯಕ ಇಂದು ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಘೋಷಿಸಿರುವ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸೋಣ ಎಂಬ ಹೇಳಿಕೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಎಲ್ಲಾ ಬಣ ರಾಜಕೀಯಕ್ಕೆ ತಿಲಾಂಜಲಿ ಇಟ್ಟಂತೆ ಆಗಿದೆ.
ಇಂದು ಶಿವಮೊಗ್ಗದಲ್ಲಿ ಮಾಜಿ ಜಿಪಂ ಸದಸ್ಯ ಹುನಗೋಡು ರತ್ನಾಕರ್ ಸುದ್ದಿಗೋಷ್ಟಿ ನಡೆಸಿ ಬಂಡಾಯ ಸ್ಪರ್ಧೆ ಮಾಡುವುದಾಗಿ ಹೇಳಿದ್ದು ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿತ್ತು ಆದರೆ ಕೆಲವೇ ಸಮಯದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ರವರ ಹೇಳಿಕೆಯಿಂದ ಸಾಗರ ಕ್ಷೇತ್ರದ ಬಣ ರಾಜಕೀಯ ಅಂತಿಮವಾದಂತೆ ಎಂದು ಹೇಳಲಾಗುತ್ತಿದೆ.