ಸಾಗರ ತಾಲೂಕಿನ ಜೋಗದಲ್ಲಿನ ಶಾಲೆಯೊಂದರ 25ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು, ಊಟ ಸೇವಿಸಿದ ನಂತ್ರ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಾಗರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಘಟನೆ ನಡೆದಿದೆ.
ಸಾಗರದ ಜೋಗದ ಬಳಿಯ ಕ್ರಿಸ್ತ ಪ್ರಕಾಶ್ ಹಿರಿಯ ಪ್ರಾಥಮಿಕ ಶಾಲೆಯ ಹಾಸ್ಟೆಲ್ ವಿದ್ಯಾರ್ಥಿಗಳು ಇಂದು ರಾತ್ರಿ ನೀಡಿದಂತ ಊಟವನ್ನು ಸೇವಿಸಿದ್ದಾರೆ. ಈ ಬಳಿಕ ತಕ್ಷಣ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ.
ಕೂಡಲೇ ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಸಾಗರದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಸಿದ್ದಾರೆ. ವಿದ್ಯಾರ್ಥಿಗಳಿಗೆ ವೈದ್ಯರು ಚಿಕಿತ್ಸೆ ನೀಡಿದ ಪರಿಣಾಮ ಚೇತರಿಸಿಕೊಂಡಿರೋದಾಗಿ ತಿಳಿದು ಬಂದಿದೆ. ವಿದ್ಯಾರ್ಥಿಗಳಿಗೆ ಪುಡ್ ಪಾಯಿಸನ್ ನಿಂದ ಹೀಗೆ ಆಗಿದೆ ಎನ್ನಲಾಗುತ್ತಿದೆ.
ಈ ವಿಷಯ ತಿಳಿದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದರು. ಅಲ್ಲದೇ ಸ್ಥಳದಲ್ಲಿದ್ದಂತ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.