ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಸುರೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ನಗರದ ರೈಲ್ವೆ ಫ್ಲೈ ಓವರ್ ಬಳಿಯ ಸಂಗೊಳ್ಳಿ ರಾಯಣ್ಣ ಬಳಿ ಸ್ನೇಹಿತರಿಬ್ಬರು ಪಾರ್ಟಿ ಮಾಡಿದ್ದರು.ಹಿಂದಿರುಗುವಾಗ ಸುರೇಶ್ ಗೆ ಅಪರಿಚಿತರು ಪಲ್ಸರ್ ಬೈಕ್ ನಲ್ಲಿ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ.
ಈ ವೇಳೆ ಆತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ಚಿಕಿತ್ಸೆ ಫಲಕಾರಿಯಾದೇ ಸುರೇಶ್ ಮೃತಪಟ್ಟಿದ್ದಾನೆ. ಆದರೆ ಮೃತ ಸುರೇಶ್ ಮೈಮೇಲೆ ಅಪಘಾತದ ಯಾವುದೇ ಗಾಯಗಳಿಲ್ಲ. ಈ ನಡುವೆ ಆತ ಹೇಗೆ ಮೃತಪಟ್ಟನು ಎನ್ನುವ ಅನುಮಾನ ಕಾಡುತ್ತಿದೆ.
ಮೃತಪಟ್ಟ ಸುರೇಶ್ ಶಿವಮೊಗ್ಗದ ಶರಾವತಿ ನಗರದಲ್ಲಿ ತನ್ನ ಸಂಬಂಧಿಕರ ಮನೆಯಲ್ಲಿ ಇದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತಿದ್ದನು.
ಒಟ್ಟಾರೆಯಾಗಿ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ ಇದ್ದು ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.