ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದಲ್ಲಿ ನಡೆದಿದೆ.
ನೆವಟೂರು ನಿವಾಸಿ ಸುರೇಶ್ ಆಚಾರಿ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ನೆವಟೂರು ಬಳಿ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ಯಾವ ರೈಲು ಹಾಗೂ ಘಟನೆಗೆ ಕಾರಣ ಏನೆಂಬುವುದು ತಿಳಿದುಬಂದಿಲ್ಲ.
ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನೆವಟೂರಿನ ಮೃತರ ಮನೆಗೆ ರವಾನಿಸಲಾಗಿದೆ.
ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.