ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.
ಮೂಗೂಡ್ತಿ – ತಳಲೆ ಮಾರ್ಗದಲ್ಲಿ ಬೈಕ್ ನಲ್ಲಿ ತೆರಳುತಿದ್ದ ಸುಳಗೋಡು ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಬೈಕ್ ಸವಾರ ಕುಮಾರ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ತಳಲೆ ಮಾರ್ಗದ ಇಳಿಜಾರಿನಲ್ಲಿ ಚಲಿಸುತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದ ಹಿನ್ನಲೆಯಲ್ಲಿ ಬೈಕ್ ನಲ್ಲಿ ತೆರಳುತಿದ್ದ ಇಬ್ಬರು ಸಿಲುಕಿ ಕೊಂಡಿದ್ದಾರೆ ತಕ್ಷಣ ಸ್ಥಳೀಯರು ಹಾಗೂ ಹೆದ್ದಾರಿಪುರ ಗ್ರಾಪಂ ಸದಸ್ಯ ಪ್ರವೀಣ್ ಸುಳುಗೋಡು ಇಬ್ಬರನ್ನು ಹೊರತೆಗೆದು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ.
ಮಂಜುನಾಥ್ ಎಂಬುವವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿರುವುದರಿಂದ ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು.
ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಹಿನ್ನಲೆಯಲ್ಲಿ ಮೂಗೂಡ್ತಿ-ತಳಲೆ ಸಂಚಾರ ವ್ಯತ್ಯಯವಾಗಿದ್ದು,ಮರ ತೆರವುಗೊಳಿಸುವ ಕಾರ್ಯಾಚರಣೆ ಇನ್ನಷ್ಟೇ ನಡೆಯಬೇಕಾಗಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇