Headlines

ರಿಪ್ಪನ್‌ಪೇಟೆ : ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ – ತಪ್ಪಿದ ಭಾರಿ ಅನಾಹುತ|Fire

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.




ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಇನ್ನೊಂದೆಡೆಗೆ ಅಗ್ನಿ ಅವಘಡ ಸಂಭವಿಸಿದ ಸ್ಥಳದ ಕೂದಲೆಳೆ ಅಂತರದಲ್ಲಿ ಮರದ ಸಾಮಿಲ್ ಹಾಗೂ ಪೆಟ್ರೋಲ್ ಬಂಕ್ ಇತ್ತು ಸ್ಥಳೀಯರ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರಿ ದೊಡ ಅನಾಹುತ ತಪ್ಪಿದೆ.




 ಘಟನೆಯ ಹಿನ್ನಲೆ :

ನೆಹರು ಬಡಾವಣೆಯ ಖಾಸಗಿ ವ್ಯಕ್ತಿಯೊಬ್ಬ ರಬ್ಬರ್ ತೋಟದಲ್ಲಿ ಪ್ರಥಮವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ತನ್ನ ಕೆನ್ನಾಲಿಗೆಯನ್ನು ಎರಡು ಹೆಕ್ಟೇರ್ ಪ್ರದೇಶಕ್ಕೆ ಆವರಿಸಿಕೊಂಡಿತ್ತು.

ಇದನ್ನು ಗಮನಿಸಿದ ನೆಹರು ಬಡಾವಣೆಯ ಸ್ಥಳೀಯರು ಹಾಗೂ ಗ್ರಾಪಂ ಸದಸ್ಯ ಆಸೀಪ್ ಕೂಡಲೇ ಎಚ್ಚೆತ್ತುಕೊಂಡು ಬೆಂಕಿ ನಂದಿಸಲು ಯತ್ನಿಸುವುದರೊಂದಿಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.




ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

About The Author

Leave a Reply

Your email address will not be published. Required fields are marked *