ಶಿವಮೊಗ್ಗದ ಸೋಗಾನೆಯ ನೂತನ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಇವತ್ತು ಮಧ್ಯಾಹ್ನ ಬಂದಿಳಿದಿದೆ.
ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಸೋಗಾನೆಯ ಕುವೆಂಪು ವಿಮಾನ ನಿಲ್ದಾಣದ ರನ್ ವೇಯಲ್ಲಿ ಬಂದಿಳಿದಿದ್ದು ಯಾವುದೇ ಅಡೆತಡೆ ಉಂಟಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ವಾಯು ಸೇನೆಯ ಬೋಯಿಂಗ್ 737 – 7HI ಮಾದರಿಯ ವಿಮಾನ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದೆ. ಮಧ್ಯಾಹ್ನ 12 ಗಂಟೆಗೆ ಈ ವಿಮಾನ ದೆಹಲಿಯಿಂದ ಹೊರಟಿತ್ತ್ತು. ಮಧ್ಯಾಹ್ನ 2.30ರ ಹೊತ್ತಿಗೆ ವಿಮಾನ ಲ್ಯಾಂಡ್ ಆಗಿದೆ.
ವಿಮಾನ ಬಂದಿಳಿಯುತಿದ್ದಂತೆ ಸುತ್ತಮುತ್ತಲಿನ ಜನರು ಕುತೂಹಲದಿಂದ ವೀಕ್ಷಿಸಿ ಸಂಭ್ರಮಿಸಿದರು.