ರಿಪ್ಪನ್ಪೇಟೆ : ತುಮಕೂರು ಜಿಲ್ಲೆಯ ಕ್ಯಾತಸಂದ್ರ ಬಳಿ ಚಲಿಸುತಿದ್ದ ರೈಲಿನಿಂದ ಬಿದ್ದು ಪಟ್ಟಣದ ಶಬರೀಶನಗರದ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಶಬರೀಶನಗರದ ಡಾ. ಗುರುರಾಜ್ ((46) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಶುಕ್ರವಾರ ಬೆಂಗಳೂರಿನಿಂದ – ಶಿವಮೊಗ್ಗಕ್ಕೆ ರೈಲಿನಲ್ಲಿ ಸಂಚರಿಸುತಿದ್ದಾಗ ಕ್ಯಾತಸಂದ್ರದ ಬಳಿ ರೈಲಿನ ಬಾಗಿಲು ತಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತಿದೆ.
ಡಾ. ಗುರುರಾಜ್ ರಿಪ್ಪನ್ಪೇಟೆ,ಹೊಸನಗರ ಮತ್ತು ಗೌತಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.ಪ್ರಸ್ತುತ ಸಂಪೆಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತಿದ್ದರು.ಇತ್ತೀಚಿಗೆ ಕೊಡಗು ಜಿಲ್ಲೆಯಲ್ಲಿ ಉನ್ನತ ಶಿಕ್ಷಣವಾದ ಎಂ ಡಿ ಮುಗಿಸಿದ್ದರು.
ರಿಪ್ಪನ್ಪೇಟೆ ಪಟ್ಟಣದ ಶಬರೀಶನಗರದ ನಿವೃತ ಶಿಕ್ಷಕ ದಿ|| ಗಂಗಾಧರಪ್ಪ ರವರ ಪುತ್ರರಾದ ಡಾ. ಗುರುರಾಜ್ ಗ್ರಾಮೀಣ ಭಾಗದಲ್ಲಿ ಉತ್ತಮ ವೈದ್ಯಕೀಯ ಸೇವೆ ಸಲ್ಲಿಸಿ ಜನರ ಪ್ರೀತಿಗೆ ಪಾತ್ರರಾಗಿದ್ದರು.
ಮೃತದೇಹವನ್ನು ತುಮಕೂರಿನಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ರಿಪ್ಪನ್ಪೇಟೆಯ ಸರ್ಕಾರಿ ಆಸ್ಪತೆಯಲ್ಲಿ ಅಂತಿಮ ದರ್ಶನಕ್ಕೆ ತರಲಾಗಿತ್ತು ಈ ಸಂಧರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ವೈದ್ಯರ ಮೃತದೇಹದ ಅಂತಿಮ ದರ್ಶನ ಪಡೆದರು.
ಶಬರೀಶನಗರದ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ನಂತರ ದಾವಣಗೆರೆಯ ನೆಲ್ಕುದುರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್