ಮಹಿಳೆಯೋರ್ವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡಲು ಯತ್ನಿಸಿದ ಮೂವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 22 ಸಾವಿರ ರೂ ದಂಡ ವಿಧಿಸಿದೆ.
2016 ರಲ್ಲಿ ಶಿವಮೊಗ್ಗದ ಮಲವಗೊಪ್ಪ ಬಡಾವಣೆಯಲ್ಲಿ ಶೋಭಾ(26) ಮತ್ತು ಪತಿ ಹಾಲೇಶ್ ನಾಯ್ಕನಿಗೂ ಕೌಟಂಬಿಕ ವಿಚಾರದಲ್ಲಿ ಗಲಾಟೆ ನಡೆದಿತ್ತು. ಇದರಿಂದ 2016 ರಲ್ಲಿ ಶೋಭಾ ತನ್ನ ತಾಯಿಯೊಂದಿಗೆ ಮಲವಗೊಪ್ಪ ಬಸ್ ನಿಲ್ದಾಣದಲ್ಲಿ ನಿಂತಾಗ ಹಾಲೇಶ್ ನಾಯ್ಕ ಹರಿತವಾದ ಆಯುಧದಿಂದ ಆಕೆಯ ತಲೆ ಹಾಗೂ ಇತರೆ ಕಡೆ ಮಾರಾಣಾಂತಿಕ ಹಲ್ಲೆ ನಡೆಸಿದ್ದರು.
ಹಾಲೇಶ್ ನಾಯ್ಕನ ಜೊತೆ ರವಿ ನಾಯ್ಕ, ದಾದು ನಾಯ್ಕ್ ಹಾಗೂ ವೆಂಕ್ಯಾನಾಯ್ಕ್ ತನ್ನ ಕೊಲೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಶೋಭ ಅವರು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 114, 307, 326, 504, 506 ರ ಅಡಿ ದೂರು ನೀಡಿದ್ದರು. ಈ ಪ್ರಕರಣದ ಕುರಿತು ಅಂದಿನ ಸಿಪಿಐ ಗಿರೀಶ್ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪ್ರಕರಣದ ವಾದ ಆಲಿಸಿದ ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಾನು ಕೆ.ಎಸ್ ಅವರು ಆರೋಪಿಗಳ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗಳಾದ ರವಿ ನಾಯಕ್ (28), ದಾದು ನಾಯ್ಕ(36) ಹಾಗೂ ವೆಂಕ್ಯಾನಾಯ್ಕ್(40) ಅವರಿಗೆ 2 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಮೂರು ಜನಕ್ಕೆ ತಲಾ 22 ಸಾವಿರ ರೂ ದಂಡ ವಿಧಿಸಿದೆ. ಒಂದು ವೇಳೆ ಹಣ ಕಟ್ಟಲು ಆಗದೆ ಹೋದರೆ 3 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರಿ ಅಭಿಯೋಜಕ ಶಾಂತರಾಜ್ ಅವರು ವಾದ ಮಂಡಿಸಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್