ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ
ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು.31 ಬುಧವಾರ Hosanagara ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹೊಸನಗರ ತಾಲೂಕಿನ ಪದವಿ ಕಾಲೇಜುಗಳಿಗೆ ರಜೆ ಇರುವುದಿಲ್ಲ ಉಳಿದಂತೆ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಆದೇಶ ಹೊರಡಿಸಿದ್ದಾರೆ.
ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಬುಧವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಹೊಸನಗರ ಹಾಗೂ ತೀರ್ಥಹಳ್ಳಿ ತಹಶೀಲ್ದಾರರು ಪಾಲಕರಲ್ಲಿ ವಿನಂತಿಸಿದ್ದಾರೆ.