ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಮಂಡಘಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.
ರಿಪ್ಪನ್ ಪೇಟೆಯಿಂದ ಶಿವಮೊಗ್ಗದ ಕಡೆ ಹೋಗುವಾಗ ಐ20 ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಿಪ್ಪನ್‌ಪೇಟೆಗೆ ಟೈಲ್ಸ್ ಕೆಲಸಕ್ಕೆಂದು ಬಂದು ಹಿಂದಿರುಗುತ್ತಿರುವಾಗ ಈ ಘಟನೆ ನಡೆದಿದೆ. ಚಾಲಕ ದಸ್ತಗಿರಿ ಮತ್ತು ಜೊತೆಯಲ್ಲಿದ್ದ ಆರೀಫ್ ಗೆ ಸಣ್ಣಪುಟ್ಟಗಾಯಗಳಾಗಿದ್ದು ಮೆಗ್ಗಾನ್ ನಲ್ಲಿ ಹೊರರೋಗಿಯಾಗಿ ದಾಖಲಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,ದೂರು ದಾಖಲಾಗಿದೆ.
ಆನಂದಪುರದ ಸಮೀಪ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ
ಸಾಗರ : ತಾಲೂಕಿನ ಆನಂದಪುರ ಸಮೀಪದ ಬೈರಾಪುರದ ಪೀರನ ಕಣಿವೆ ಬಳಿ ಬೃಹತ್ ಲಾರಿ ಲೈಟ್ ಕಂಬಕ್ಕೆ ಗುದ್ದಿದ ಘಟನೆ ನಡೆದಿದೆ.
ಶಿಕಾರಿಪುರದಿಂದ ಆನಂದಪುರದ ಕಡೆ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದ್ದು ಲಾರಿ ಚಾಲಕ ಕೌಶಿಕ್ ಎಂಬುವರಿಗೆ ತೀವ್ರ ಗಾಯವಾಗಿದೆ.
ತಕ್ಷಣ ಗಾಯಾಳುವನ್ನು ಶಿಕಾರಿಪುರದ ಆಸ್ಪತ್ರೆಗೆ ದಾಖಲಿಸಲಾಯಿತು
ಸ್ಥಳಕ್ಕೆ ತಕ್ಷಣ 112 ಪೊಲೀಸ್ ಸಿಬ್ಬಂದಿಗಳಾದ ಕುಬೇರ ಹಾಗೂ ಸಂತೋಷ್ ನಾಯಕ್ ಆಗಮಿಸಿ ಉಳಿದ ವಾಹನಗಳಿಗೆ ಸಂಚಾರಕ್ಕೆ ಅನುವು ಮಾಡಿಕೊಟ್ಟು ಗಾಯಾಳುವಿಗೆ ಆಸ್ಪತ್ರೆಗೆ ಸಾಗಿಸಲು ನೆರವಾದರು.