ಶಿವಮೊಗ್ಗ ಮತ್ತು ಶಿರಾಳಕೊಪ್ಪದಲ್ಲಿ ಅನ್ಯಕೋಮಿನ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಯುವಕರಿಗೆ ಗಾಯಗಳಾಗಿವೆ.
ಶಿವಮೊಗ್ಗದಲ್ಲಿ ಈಜಲು ಹೋಗಿದ್ದಾಗ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಅನ್ಯಕೋಮಿನ ಯುವಕರು ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಅಪ್ರಾಪ್ತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ಅನ್ಯಕೋಮಿನವರಿಂದ ಹಲ್ಲೆ ನಡೆದಿದೆ. ವೇಗವಾಗಿ ಹಾಗೂ ನಿರ್ಲಕ್ಷದಿಂದ ಬೈಕ್ ಚಲಾಯಿಸಬೇಡ ಎಂದು ಹೇಳಿದ್ದಕ್ಕೆ ಶಿರಾಳಕೊಪ್ಪದ ಮಾರ್ಕೆಟ್ ನಲ್ಲಿ ಮಂಜುನಾಥ ಮತ್ತು ಸುರೇಶ್ ಮೇಲೆ ಹಲ್ಲೆ ನಡೆಸಲಾಗಿದೆ. ನನಗೆ ಬುದ್ಧಿವಾದ ಹೇಳುತ್ತಿಯಾ ಎಂದು ತೂಕ ಮಾಡುವ ಕಲ್ಲಿನಿಂದ ಹಲ್ಲೆ ನಡೆಸಲಾಗಿದೆ.
ಈ ವೇಳೆ ಅನ್ಯಕೋಮಿ ಯುವಕರು ಮತ್ತು ಮಂಜುನಾಥ್, ಸುರೇಶ್ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರಮಕೈಗೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್