Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ
ರಿಪ್ಪನ್‌ಪೇಟೆ : ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೋಡೂರು ಸಮೀಪದ ಕುಸುಗುಂಡಿಯಲ್ಲಿ ನಡೆದಿದೆ.
ಕಡಸೂರು ಗ್ರಾಪಂ ವ್ಯಾಪ್ತಿಯ ಮಳೂರು ಗ್ರಾಮದ ಸೋಮಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ.
ಕೋಡೂರು ಸಮೀಪದ ಕುಸುಗುಂಡಿ ಬಳಿಯಲ್ಲಿ ಅಪರಿಚಿತ ಕಾರು ಟಿವಿಎಸ್ ಸ್ಟಾರ್ ಸಿಟಿ KA -15 ED 1725 ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರ ಸೋಮಶೇಖರ್ ರವರನ್ನು ಸ್ಥಳೀಯರು 108 ಆಂಬುಲೆನ್ಸ್ ಮೂಲಕ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ದಿದ್ದಾರೆ.
ಬೈಕ್ ಸವಾರನಿಗೆ ಅಪಘಾತದಲ್ಲಿ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಪ್ರಜ್ಞೆ ಇರುವುದಿಲ್ಲ ,ಮಣಿಪಾಲ್ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.