ರಿಪ್ಪನ್‌ಪೇಟೆ : ಇಲ್ಲಿ ಹೊಸನಗರ ರಸ್ತೆಯ ಮಸೀದಿ ಸಮೀಪದ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತಿದ್ದು ಅದಕ್ಕೆ ಅನುಮತಿ ನೀಡಬಾರದು ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ಪ್ರಗತಿಪರ ಚಿಂತಕರಿಂದ ಅಬಕಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಸಮೀಪದ ಖಾಸಗಿ ವಾಣಿಜ್ಯ ಕಟ್ಟಡವೊಂದರಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಹುನ್ನಾರ ನಡೆಯುತಿದ್ದು ಇದರಿಂದ ಪ್ರಾರ್ಥನಾ ಮಂದಿರಕ್ಕೆ ಬರುವ ಭಕ್ತಾಧಿಗಳಿಗೆ ಹಾಗೂ ಸನಿಹದಲ್ಲೇ ಇರುವ ಅರೆಬಿಕ್ ಮದರಸದಲ್ಲಿ ವ್ಯಾಸಂಗ ಮಾಡುವ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ.
ಆದ್ದರಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸುವುದರ ಜೊತೆಗೆ ಧಾರ್ಮಿಕ ಸ್ಥಳದ ಗೌರವ ಕಾಪಾಡುವ ಸಲುವಾಗಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಬಾರದು ಎಂದು ಅಬಕಾರಿ ಜಿಲ್ಲಾಧಿಕಾರಿಳು ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಅರ್ ಎ ಚಾಬುಸಾಬ್ ,ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ,ಜನಪರ ಹೋರಾಟಗಾರ ಟಿ ಆರ್ ಕೃಷ್ಣಪ್ಪ ,ಮೊಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಮಹಮ್ಮದ್ ರಫ಼ಿ ,ಕಾರ್ಯದರ್ಶಿ ಶಫ಼ಿವುಲ್ಲಾ ಮುಖಂಡರಾದ ಕೆಹೆಚ್ ಆರ್ ಮಹಮ್ಮದ್ , ಹಸನಬ್ಬ ಹಾಗೂ ಇನ್ನಿತರರಿದ್ದರು.