ಕೊರೊನಾ ನಾಲ್ಕನೇ ಅಲೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ.ಕೊರೊನಾ ಬಂದು ಹೋಗುತ್ತದೆ. ಈ ಬಾರಿಯ ಕೊರೊನಾ ಅಷ್ಟೊಂದು ಪರಿಣಾಮ ಬೀರುವುದಿಲ್ಲ. ಈ ಬಾರಿ ಕೊರೊನಾದಿಂದ ಯಾವುದೇ ಸಾವು-ನೋವುಗಳು ಸಂಭವಿಸುವುದಿಲ್ಲ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಬಗ್ಗೆ ಯಾರು ಕೂಡ ಆತಂಕ ಪಡುವ ಅವಶ್ಯಕೆತಯಿಲ್ಲ.ಈ ವರ್ಷ ಕಾರ್ತಿಕ ಮಾಸದಿಂದ ಜನವರಿವರೆಗೆ ಲೋಕ ಕಂಟಕವಿದೆ, ದೇಹ ಅಶಕ್ತಿಯಿಂದ ಬಿದ್ದು ಸಾಯುತ್ತವೆ. ಬಾಂಬ್‌ಗಳು, ಭೂಕಂಪ, ಯುದ್ದಭೀತಿ, ಜನ ಜನಗಳ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗುವುದು, ದೇಹ ಅಶಕ್ತಿಯಿಂದ ದಾರಿಯಲ್ಲಿ ಬಿದ್ದು ಸಾಯುವುದು. ದೇಹ ಅಂಗಾಂಗಗಳ ಮೇಲೆ ಪ್ರಭಾವ ಕಳೆದುಕೊಳ್ಳುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.
ಕರ್ನಾಟಕ ರಾಜಕೀಯ ಸಂಬಂಧ ಪ್ರತಿಕ್ರಿಯಿಸಿದ ಅವರು, ಎಲ್ಲ ಪಕ್ಷಗಳು ಒಡೆಯುತ್ತದೆ ಎಂದು ನಾನು ಹಿಂದೆಯೇ ಹೇಳಿದ್ದೇನೆ. ಇದೀಗ ಈ ಮಾತುಗಳು ನಿಜವಾಗುತ್ತಿದೆ ಎಂದಿದ್ದಾರೆ. ಅಷ್ಟಕ್ಕೂ ಈ ಮಾತಿನ ಹಿನ್ನೆಲೆ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸುತ್ತಿರುವುದನ್ನು ಮುಂದಿಟ್ಟುಕೊಂಡು ಹೇಳಿದ್ದಾರೆ ಎನ್ನಲಾಗುತ್ತಿದೆ.
ನಂತರ ಒಲೆ ಹೊತ್ತಿ ಉರಿದರೆ ಅಡುಗೆ ಆಗುತ್ತದೆ. ಆದರೆ ಭೂಮಿ ಹೊತ್ತಿ ಉರಿದರೆ ಏನಾಬಹುದು ಎಂದು ಹೇಳುವ ಮೂಲಕ ಎಲ್ಲರಲ್ಲಿಯೂ ಗೊಂದಲ ಮೂಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಮುಂದೆ ಭವಿಷ್ಯದಲ್ಲಿ ಹೇಳುತ್ತೇವೆ ಎಂದು ಹೇಳಿದ್ದಾರೆ.