ರಿಪ್ಪನ್ಪೇಟೆ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪೊಲೀಸ್ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಮಂಗಳವಾರ ಬೆಳಿಗ್ಗೆ ಪಟ್ಟಣದ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಹರತಾಳು ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಮರಳು ತುಂಬಿಕೊಂಡು ಹರತಾಳು ಮಾರ್ಗವಾಗಿ ಸಾಗಿಸುತ್ತಿರುವ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ KA 06 B 3355 ಮತ್ತು KA 21 B 9718 ನೋಂದಣಿ ಸಂಖ್ಯೆಯ ಟಿಪ್ಪರ್ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹೆಚ್ ಸಿ ಉಮೇಶ್, ಶಿವಕುಮಾರ್ ನಾಯ್ಕ್ ಹಾಗೂ ಮಧುಸೂಧನ್ ಇದ್ದರು.