w
Headlines
Home » Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ 

ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್‌ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಪಟ್ಟಣದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.


ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್‌ಐ ನಿಂಗರಾಜ್ ಕೆ ವೈ ತಮ್ಮ ಸ್ವಂತ ಖರ್ಚಿನಲ್ಲಿ ಅತ್ಯಾಧುನಿಕ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದು ಕಿಡಿಗೇಡಿಗಳ ನಿದ್ದೆಗೆಡಿಸಿತ್ತು.ಇದು ರಾಜ್ಯ ಮಟ್ಟದ ಸುದ್ದಿ ವಾಹಿನಿಯಲ್ಲಿ ಪ್ರಕಟಗೊಂಡು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು.

ಪಟ್ಟಣದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತಿದ್ದ, ಪ್ರಸ್ತುತ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಇದೀಗ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು ಬುಧವಾರ ಅಧಿಕಾರವನ್ನು ಸ್ವೀಕರಿಸಲಿದ್ದಾರೆ.

ರಿಪ್ಪನ್‌ಪೇಟೆಯಲ್ಲಿ ಕಾರ್ಯ ನಿರ್ವಹಿಸುತಿದ್ದ ಪಿಎಸ್ಐ ನಿಂಗರಾಜ್ ರವರನ್ನು ಬಂಕಾಪುರ ಪೊಲೀಸ್ ಠಾಣೆಗೆ ಪಿಎಸ್ ಐ ಆಗಿ ವರ್ಗಾವಣೆಯಾಗಿದ್ದಾರೆ.

ರಿಪ್ಪನ್‌ಪೇಟೆಯಲ್ಲಿ ಸುಮಾರು ನಾಲ್ಕು ತಿಂಗಳುಗಳಿಂದ ಕಾರ್ಯ ನಿರ್ವಹಿಸಿರುವ ನಿಂಗರಾಜ್ ಕೆ ವೈ ರವರು ಪಟ್ಟಣದಲ್ಲಿ‌ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಮಲೆನಾಡಿಗರನ್ನು ಬೆಚ್ಚಿ ಬೀಳಿಸಿದ್ದ ಹುಂಚ ಮುತ್ತಿನಕೆರೆಯ ಜಯಮ್ಮ ಕೊಲೆ ಪ್ರಕರಣವನ್ನು ಘಟನೆ ನಡೆದು ಹದಿನೈದು ದಿನಗಳೊಳಗೆ ಆರೋಪಿ ಮಯೂರ್ ಭಟ್ ನ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದರು.ಇನ್ನೊಂದು ಪ್ರಕರಣದಲ್ಲಿ ದೂನ ಗ್ರಾಮದಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣವನ್ನು ಕೇವಲ 2 ಗಂಟೆಯಲ್ಲಿ ಪತ್ತೆ ಹಚ್ಚುವ ಮೂಲಕ ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. 


ಈ ಬಾರಿಯ ಬರಗಾಲದ ಹಿನ್ನಲೆಯಲ್ಲಿ ಪ್ರಾಣಿ ಪಕ್ಷಿಗಳು ನೀರಿನ ಬವಣೆಗೊಳಗಾಗಿದ್ದವು ಈ ಹಿನ್ನಲೆಯಲ್ಲಿ ಪಿಎಸ್‌ಐ ನಿಂಗರಾಜ್ ತಮ್ಮ ಸಿಬ್ಬಂದಿಗಳೊಂದಿಗೆ ಅರಣ್ಯ ಇಲಾಖೆ ಹಾಗೂ ಪೋಸ್ಟ್ ಮ್ಯಾನ್ ನ್ಯೂಸ್ ಬಳಗದ ಅಶ್ರಯದಲ್ಲಿ ” ಪಕ್ಷಿಗಳಿಗೆ ನೀರುಣಿಸಿ – ಪಕ್ಷಿ ಸಂಕುಲ ಉಳಿಸಿ” ಎಂಬ ಅಭಿಯಾನದಡಿಯಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿಡುವ ಅಭಿಯಾನ ನಡೆಸಿದ್ದು ಜನ ಮೆಚ್ಚುಗೆಗೆ ಪಾತ್ರವಾಗಿತ್ತು.


ಲೋಕಸಭಾ ಚುನಾವಣೆ ಸಂಧರ್ಭದಲ್ಲಿ ನಡೆದಿದ್ದ ಕೆಲವು ಸೂಕ್ಷ್ಮ ಘಟನೆಗಳನ್ನು ನಾಜೂಕಿನಿಂದ ನಿಭಾಯಿಸಿದ್ದ ನಿಂಗರಾಜ್ ಯಾವುದೇ ಗೊಂದಲಗಳಿಗೆ ಅವಕಾಶ ನೀಡದೇ ಚುನಾವಣೆ ಯಶಸ್ವಿಗೊಳಿಸಿದ್ದರು.

ಸರಳ ಸಜ್ಜನಿಕೆಯ ಮೂಲಕ ತನ್ನ ಕಾರ್ಯಾವಧಿಯಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದ ನಿಂಗರಾಜ್ ಕೆ ವೈ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.