ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ರೈಡ್ ಮಾಡಿದ್ದಾರೆ.
>ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ.
ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಎಸೈಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ.
ಶಾರೀಕ್ ಚಿಕ್ಕಮ್ಮನ ಮನೆ ಸೇರಿದಂತೆ ಸಂಬಂಧಿಕರ
ಒಟ್ಟು ನಾಲ್ಕು ಮನೆಗಳ ಮೇಲೆ ಪೊಲೀಸರು ರೈಡ್ ಮಾಡಿದ್ದಾರೆ. ಹಲವು ದಾಖಲೆಗಳನ್ನು ತೀರ್ಥಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದು ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವರದಿ : ಅಕ್ಷಯ್ ಕುಮಾರ್