ವಿವಾಹಿತ ಹಿಂದೂ ಮಹಿಳೆಗೆ ವಿಚ್ಛೇದನ ಕೊಡಿಸಿ, ನಂತರ ಆಕೆಯನ್ನ ಮದುವೆಯಾಗಿ ಇದೀಗ ಮತಾಂತರವಾಗುವಂತೆ ಹಿಂಸೆ ನೀಡುತ್ತಿರುವ ಆರೋಪ ಮಹಿಳೆಯಿಂದ ಕೇಳಿಬಂದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಅಬ್ದುಲ್ ಖಾದರ್ ಎಂಬಾತನ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಚಿತ್ರದುರ್ಗದ ಮಹಿಳಾ ಠಾಣೆಯ ಪೊಲೀಸರು ಎಫ್ಐಆರ್ ದಾಖಲು ಮಾಡಿ, ಈ ಸಂಬಂಧ ತನಿಖೆ ಆರಂಭಿಸಿದ್ದಾರೆ.
ತೀರ್ಥಹಳ್ಳಿ ಮೂಲದ ಸಂತ್ರಸ್ತ ಮಹಿಳೆ ಹತ್ತು ವರ್ಷಗಳ ಹಿಂದೆಯೇ ಶ್ರೀನಿವಾಸ್ ಎಂಬುವವರನ್ನ ವಿವಾಹವಾಗಿದ್ದರು. ಹೊಟ್ಟೆಪಾಡಿಗಾಗಿ ತೀರ್ಥಹಳ್ಳಿಯಲ್ಲಿರುವ ಡಯಾಲಿಸಿಸ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಅದೇ ಸೆಂಟರ್ನಲ್ಲಿ ಅಬ್ದುಲ್ ಖಾದರ್ ಕೂಡ ಕೆಲಸ ಮಾಡುತ್ತಿದ್ದ. ಇಬ್ಬರೂ ಒಂದೇ ಕಡೆ ಇದ್ದರಿಂದ ಅವರಿಬ್ಬರ ನಡುವೆ ಸ್ನೇಹ ಚಿಗುರಿತ್ತು.
ಆ ಸ್ನೇಹ ಮುಂದೊಂದು ದಿನ ಪ್ರೀತಿಯಾಗಿ ಇಬ್ಬರೂ ಸಂಪರ್ಕದಲ್ಲಿದ್ದರು. ಇಬ್ಬರ ನಡುವಿನ ಪ್ರೀತಿ-ಪ್ರೇಮ ಬಳಿಕದಲ್ಲಿ ಶ್ರೀನಿವಾಸ್ಗೆ ಡಿವೋರ್ಸ್ ನೀಡುವಂತೆ ಮಾಡಿತ್ತು.
ಅದರಂತೆ 2020ರಲ್ಲಿ ಸಂತ್ರಸ್ತ ಮಹಿಳೆ ಗಂಡನಿಗೆ ಡಿವೋರ್ಸ್ ಕೊಟ್ಟು ಬಂದಿದ್ದಳು. ನಂತರ ಅಬ್ದುಲ್ ಖಾದರ್ ಜೊತೆ ಮಹಿಳೆ ರಿಜಿಸ್ಟರ್ ಮದುವೆ ಆಗಿದ್ದಳು. ಮದುವೆ ಬಳಿಕ ಇಬ್ಬರೂ ಚಿತ್ರದುರ್ಗಕ್ಕೆ ಶಿಫ್ಟ್ ಆಗಿದ್ದರು. ಅದಾದ ನಂತರ ಇವರಿಬ್ಬರಿಗೂ ಒಂದು ಮಗು ಆಗಿತ್ತು. ಡೆಲಿವರಿ ನಂತರ ಆ ಮಹಿಳೆಗೆ ಖಾದರ್ ಟಾರ್ಚರ್ ನೀಡಲು ಶುರುಮಾಡಿದ್ದ ಎಂದು ಆರೋಪಿಸಲಾಗಿದೆ.
ನಿತ್ಯವೂ ಕುಡಿದು ಬಂದು ಧರ್ಮ ಹಾಗೂ ಜಾತಿ ನಿಂದನೆ ಮಾಡಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಸಂತ್ರಸ್ತ ಮಹಿಳೆ ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ದೂರು ದಾಖಲು ಮಾಡಿ ನ್ಯಾಯ ಒದಗಿಸುವಂತೆ ಕೋರಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್