ರಿಪ್ಪನ್ ಪೇಟೆ :ಆನವಟ್ಟಿಯಲ್ಲಿ ಜನ ಸಂಕಲ್ಪ ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದ ಗಣೇಶ್ ಪ್ರಸಾದ್ ಹೊಟೇಲ್ ನಲ್ಲಿ ಇಂದು ಸಂಜೆ ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು.
ಹೊಟೇಲ್ ನಲ್ಲಿ ಕಾಫ಼ಿ ಸವಿಯುವುದರೊಂದಿಗೆ ಜನಸಾಮಾನ್ಯರೊಂದಿಗೆ ಬೆರೆತು ಸರಳತೆ ಮೆರೆದಿದ್ದಾರೆ.ಈ ಸಂಧರ್ಭದಲ್ಲಿ ಜನಸಾಮಾನ್ಯರು ಗೃಹ ಸಚಿವರೊಂದಿಗೆ ಸೆಲ್ಪಿಗೆ ಮುಂದಾದಗ ನಗುಮೊಗದಲ್ಲೇ ಎಲ್ಲಾರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡರು.
ಗೃಹ ಸಚಿವರ ಆಗಮನದ ಸುದ್ದಿ ತಿಳಿಯುತಿದ್ದಂತೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡರು.
ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮುಖಂಡರಾದ ಕಗ್ಗಲಿ ಲಿಂಗಪ್ಪ, ಸುರೇಶ್ ಸಿಂಗ್, ಆರ್ ಟಿ ಗೋಪಾಲ್,ದೇವರಾಜ್ ,ನಿರೂಪ್ , ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಗೃಹ ಸಚಿವರ ಆಗಮನದ ಹಿನ್ನಲೆಯಲ್ಲಿ ವಿನಾಯಕ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್