ಖಾಸಗಿ ಬಸ್ಗಳ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯದಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಎಚ್ಚರಿಸಿದರು.
ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಎಚ್ಚರಿಸಿದರು.
ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆರ್ಟಿಒ ಗಂಗಾಧರ್ ಅವರೊಂದಿಗೆ ಸೇರಿ ಶಿವಮೊಗ್ಗದ ಖಾಸಗಿ ಬಸ್ಗಳ ಮಾಲೀಕರ ಸಭೆ ನಡೆಸಿದ ಅವರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಹಾಗೂ ಅವರಿಗೆ ಯಾವುದೇ ತೊಂದರೆಯಾಗದಂತೆ ನಡೆದುಕೊಳ್ಳಲು ತಿಳಿಸಿದರು.
ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಅಪಘಾತ ತಡೆಗಟ್ಟುಲು ವೇಗ ಮಿತಿ ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬಸ್ ಗಳನ್ನು ಎಲ್ಲೆಂದರಲ್ಲಿ ನಿಲ್ಲಿಸದೇ, ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ನಿಲುಗಡೆ ಮಾಡಲು ಹೇಳಿದರು.
ಬಸ್ ಗಳಲ್ಲಿ ಸರಕು ಸಾಗಾಣಿಕೆಯ ಸಮಯದಲ್ಲಿ ಗಮನ ಹರಿಸುವುದು. ಒಂದು ವೇಳೆ ಯಾವುದೇ ಅನುಮಾನಾಸ್ಪದ ಸರಕು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ತಿಳಿಸಿದರು.
ಬಸ್ಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಕಂಡುಬಂದಲ್ಲಿ ಸಂಬಂಧಪಟ್ಟ ಖಾಸಗಿ ಬಸ್ಗಳ ಮಾಲೀಕರೇ ಹೊಣೆಗಾರರಾಗಿರುತ್ತಾರೆ ಎಂದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಉಪವಿಭಾಗದ ಡಿವೈಎಸ್ಪಿ ಬಾಲರಾಜ್, ಪೊಲೀಸ್ ವೃತ್ತ ನಿರೀಕ್ಷಕರು, ಶಿವಮೊಗ್ಗ ಸಂಚಾರ ವೃತ್ತ ಮತ್ತು ಪಿಎಸ್ಐ (ಸಂಚಾರ) ರವರುಗಳು ಉಪಸ್ಥಿತರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್