ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದ್ದು,ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ತೂದೂರು ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದೆ.
ತೂದೂರು ಗ್ರಾಮದ ಸರ್ಕಾರಿ ಶಾಲೆ ಹಿಂಬಾಗ ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಉಕ್ಕಡದಲ್ಲಿ ಶವವನ್ನು ಮೇಲಕ್ಕೆತ್ತಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.