w
Headlines
Home » ಆಗುಂಬೆ ಸಮೀಪದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು | Lighting

ಆಗುಂಬೆ ಸಮೀಪದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು | Lighting

ಸಿಡಿಲು ಬಡಿದು ವ್ಯಕ್ತಿ ಸಾವು | lighting

ತೀರ್ಥಹಳ್ಳಿ : ತಾಲೂಕಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಳೆ ಜೊತೆಗೆ ಸಿಡಿಲ ಆರ್ಭಟವು ಹೆಚ್ಚಾಗಿದೆ. ಇದೆ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಆಗುಂಬೆ ಬಳಿ ನಡೆದಿದೆ.

ಮೃತ ದುರ್ದೈವಿ ನಾಗೇಂದ್ರ ಬಿನ್ ಸಿನ್ ಪೂಜಾರಿ ( 40 ವರ್ಷ ) ಎಂದು ಗುರುತಿಸಲಾಗಿದ್ದು ಇವರು ಬೀದರಗೋಡು ಗ್ರಾಮದವರು.  

ಇವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಬಿನ್ ವಿಠಲ್ ಕಿಣಿ ಇವರ ಅಡಿಕೆ ತೋಟದಲ್ಲಿ ತೋಟದ ಕಳೆ ತೆಗೆಯುವ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನಪ್ಪಿದ್ದಾರೆ.

ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.