ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಬಾಲಕರವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ 400 ಮೀಟರ್ ಓಟದ ವಿಭಾಗದಲ್ಲಿ ದೀಕ್ಷಾ ಎಂಬ ವಿದ್ಯಾರ್ಥಿನಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಹೊಸನಗರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆಯುವುದರ ಮೂಲಕ ಜಿಲ್ಲೆಯಲ್ಲಿ ಉನ್ನತ ಸ್ಥಾನವನ್ನು ಹೊಂದಿರುವ ಅಮೃತ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳು ಈಗ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ಕ್ರೀಡಾ ಚಟುವಟಿಕೆಗಳಲ್ಲಿ ಸೈ ಎನಿಸಿ ಕೊಳ್ಳುವುದರ ಮೂಲಕ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗೃಹ ಸಚಿವ ಆರಗ ಜ್ಞಾನೇಂದ್ರ,. ಕಾರ್ಯಾಧ್ಯಕ್ಷರಾದ ಟಿ. ಡಿ ಸೋಮಶೇಖರ.ಪ್ರಾಚಾರ್ಯ ಮಹಮ್ಮದ್ ನಜಹತ್ ಉಲ್ಲಾ. ಕಾಲೇಜು ಅಭಿವೃದ್ಧಿ ಸಮಿತಿಯವರು. ಉಪನ್ಯಾಸಕರು, ಸಿಬ್ಬಂದಿ ವರ್ಗದವರು, ಹಾಗೂ, ಗರತಿ ಕೆರೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.