ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಹೊರವಲಯದ ಮಲವಗೊಪ್ಪ ಬಳಿಯ ಇಂದಿರಾ ಕಾಲೋನಿಯಲ್ಲಿ ನಡೆದಿದೆ.
ಇಂದಿರಾ ಕಾಲೋನಿ ನಿವಾಸಿ ಗೌರಮ್ಮ ಮೃತ ದುರ್ದೈವಿಯಾಗಿದ್ದಾರೆ.
ನಿರಂತರ ಮಳೆಯಿಂದಾಗಿ ಗೌರಮ್ಮ ಅವರ ಮನೆ ಗೋಡೆಗಳು ತೇವಗೊಂಡಿದ್ದು, ನಿನ್ನೆ ತಡರಾತ್ರಿ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಗೌರಮ್ಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಗೌರಮ್ಮ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಹಾಗೂ ಪಾಲಿಕೆ ಸದಸ್ಯ ಆರ್.ಸಿ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.