ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.


ಅವರು ಭಾನುವಾರ ಪಟ್ಟಣದ ಜಿಎಸ್ ಬಿ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್ ಗಂಗಾಮತಸ್ಥರ ಸಮಾಜ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೊರೊನಾದಿಂದಾಗಿ ಸಮಾಜಗಳ ಆರ್ಥಿಕ ಮಟ್ಟ ಕುಸಿಯುವಂತಾಗಿದೆ.ತಾವು ಸಮಾಜದಲ್ಲಿನ ತಮ್ಮ ಮಕ್ಕಳಿಗಾಗಿ ವಸತಿ ನಿಲಯಗಳನ್ನು ಆರಂಭಿಸಿ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತುನೀಡಿ ವಿದ್ಯೆಯೊಂದಿಗೆ ಸದೃಢ ಸಮಾಜ ನಿರ್ಮಾಣ ಮಾಡುವ ಮೂಲಕ ಸಂಘಟನೆಗೆ ಬಲತುಂಬಬೇಕಾಗಿದೆ ಎಂದರು.


ಗಂಗಾಮತಸ್ಥ ಜನಾಂಗ ಎಸ್ ಟಿ ಗೆ ಸೇರಿಸುವ ಬಹಳ ಕಾಲದ ಬೇಡಿಕೆಯನ್ನು ಸರ್ಕಾರದ ಮಟ್ಟದಲ್ಲಿ ಗಮನ ಸೆಳೆದು,ಮುಖ್ಯಮಂತ್ರಿ ಗಳಿಗೂ ಮನವರಿಕೆ ಮಾಡಿಕೊಡುವ ಮೂಲಕ ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದರು.


ನಂತರ ಮಾತನಾಡಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೆ.ಪಿ.ಎಸ್ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಕೆ.ಆರ್.ಧರ್ಮಪ್ಪ  ಈ ಬಾರಿ ನಮ್ಮ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಬಗ್ಗೆ ಶಾಸಕ ಹರತಾಳು ಹಾಲಪ್ಪ ಶಾಸನ ಸಭೆಯಲ್ಲಿ ಧ್ವನಿ ಎತ್ತಿ ನಮ್ಮ ಸಮಾಜವನ್ನು ಎಸ್ ಟಿ ಗೆ ಸೇರಿಸಲು ವಿಶೇಷ ಕಾಳಜಿ ವಹಿಸಬೇಕು  ಎಂದು ಸಮಾಜದ ಪರವಾಗಿ ಒತ್ತಾಯಿಸಿದರು.


ಹೊಸನಗರ ತಾಲ್ಲೂಕ್ ಗಂಗಾಮತಸ್ಥ ಸಮಾಜದ ಅಧ್ಯಕ್ಷ ಉಮೇಶ್ ಕೆ.ವೈ.ಕಾಳೇಶ್ವರ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ತಾಲೂಕು ಗಂಗಾಮತಸ್ಥ ನೌಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗಂಗಾಧರ ಕೆ, ತಾ.ಗ.ಮ.ಸ.ಗೌ.ಅಧ್ಯಕ್ಷ ರುಕ್ತೇಶ್, ಮಂಜುನಾಥ ಎಸ್.ಬ್ಯಾಣದ, ನಾಗೇಶ್ ಜಿ.ಗ.ಮ.ಸಂಘದ ಅಧ್ಯಕ್ಷ ಡಿ.ಬಿ.ಕೆಂಚಪ್ಪ,ಜಿ.ಗ.ಮ.ನೌ.ಕ್ಷೇ.ಸಂಘದ ಅಧ್ಯಕ್ಷ ಚಂದ್ರಶೇಖರ್, ಗ್ರಾ.ಪ.ಮಾಜಿ ಅಧ್ಯಕ್ಷ ಹೆಚ್.ಬಿ.ಚಿದಂಬರ, ಹಾಲೇಶಪ್ಪ, ಶಶಿಕಲಾ, ಗುರುಮೂರ್ತಿ ಪಾಂಡುರಂಗ, ಓಂಕೇಶ್, ರಮೇಶ್, ಹೂವಪ್ಪ, ಸತ್ಯನಾರಾಯಣ, ಆನಂದ, ನಾಗೇಂದ್ರ, ಚಂದಳ್ಳಿ, ಮೇಘರಾಜ್, ವಿನೋಧ ಹರೀಶ ಇಂದ್ರೇಶ್, ವೇದಾವತಿ, ರಮ್ಯ, ಸರಸ್ವತಿ ಇನ್ನಿತರರು ಪಾಲ್ಗೊಂಡಿದ್ದರು.



ಇದೇ ಸಂದರ್ಭದಲ್ಲಿ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ.ಮತ್ತು ಪಿಯುಸಿ ಪರೀಕ್ಷೆ ಯಲ್ಲಿ ಅತಿಹೆಚ್ಚು ಅಂಕಗಳಿಸಿ ಉತ್ತೀರ್ಣಾರಾದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ’’ನೀಡಿ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಕು. ರಶ್ಮಿ ಪ್ರಾರ್ಥಿಸಿದರು. ಪ್ರಧಾನ ಕಾರ್ಯದರ್ಶಿ ಲೋಹಿತ್‌ಕುಮಾರ್ ಹೆಚ್.ಸ್ವಾಗತಿಸಿದರು. ದಿನೇಶ್ ಜಿ.ಮಾದಾಪುರ ನಿರೂಪಿಸಿದರು.

Leave a Reply

Your email address will not be published. Required fields are marked *