ಹೊಸನಗರ : 2023ರಲ್ಲಿ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿ ಆಗುವುದನ್ನು ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲವೆಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ಹೇಳಿದರು.
ಪಟ್ಟಣದ ಗಾಯತ್ರಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು ಶಿವಮೊಗ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲು ಜೆಡಿಎಸ್ ಪಕ್ಷವು ಬೇರೂರಿ ಅತ್ಯಂತ ಕ್ರಿಯಾಶೀಲವಾಗಿ ಇದ್ದದ್ದು ಈ ಹೊಸನಗರ ತಾಲ್ಲೂಕಿನಲ್ಲಿ ಕೆಲ ರಾಜಕೀಯ ಸ್ಥಿತ್ಯಂತರಗಳಿಗೆ ಕಾರ್ಯಕರ್ತರು ಚದುರಿದ್ದು ಅವರನ್ನು ಒಗ್ಗೂಡಿಸುವ ಕೆಲಸ ಮಾಡಬೇಕಾಗಿದೆ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಮಾಡಿರುವ ಅಭೂತಪೂರ್ವ ಜನಪರ ಯೋಜನೆಗಳಿಗೆ ರಾಜ್ಯದ ಎಲ್ಲಾ ವರ್ಗದ ಜನರು ಮೆಚ್ಚುಗೆ ಸೂಚಿಸಿದ್ದಾರೆ ಆದರೆ ಅದು ಮತವಾಗಿ ಪರಿವರ್ತನೆ ಆಗದೇ ಇರುವುದು ದುರದೃಷ್ಟಕರ ಎಂದರು.
ನಮ್ಮ ಕಾರ್ಯಕರ್ತರುಗಳು ಕುಮಾರಸ್ವಾಮಿಯವರು ಮಾಡಿರುವ ಸಾಲ ಮನ್ನಾ ಯೋಜನೆಯ ಫಲಾನುಭವಿ ರೈತರನ್ನು ಸಂಪರ್ಕಿಸಿ 1ಬಾರಿ ಜೆಡಿಎಸ್ ಗೆ ಬೆಂಬಲಿಸುವಂತೆ ಮನವಿ ಮಾಡಬೇಕು,ಈ ಬಾರಿ ಜೆಡಿಎಸ್ ಕಾರ್ಯಕರ್ತರು ಅತಿ ಶ್ರಮವಹಿಸಿ ಕುಮಾರಸ್ವಾಮಿಯವರು 2023 ರಲ್ಲಿ ಈ ರಾಜ್ಯದ ಮುಖ್ಯಮಂತ್ರಿಯಾಗುವ ಸನ್ನಿವೇಶಕ್ಕೆ ಸಾಕ್ಷಿಯಾಗಬೇಕು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜೆಡಿಎಸ್ ರಾಜ್ಯ ಮುಖಂಡ ಆರ್ ಎ ಚಾಬುಸಾಬ್ ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿದ್ದು ಈಗಲೂ ಕೂಡ ಪಕ್ಷದ ಪರ ಒಲವು ಹೊಂದಿದ್ದಾರೆ,ಮುಖಂಡರು ಹಾಗೂ ಕಾರ್ಯಕರ್ತರ ನಡುವಿನ ಸಂವಹನ ಕೊರತೆಯಿಂದ ಪಕ್ಷದ ಸಂಘಟನೆಯಲ್ಲಿ ಹಿನ್ನಡೆಯಾಗಿತ್ತು ಈಗ ತೀರ್ಥಹಳ್ಳಿ ಕ್ಷೇತ್ರದ ಯುವ ನಾಯಕ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ನಿಯೋಜಿತ ಅಭ್ಯರ್ಥಿ ಯಡೂರು ರಾಜಾರಾಮ್ ಅವರ ಸಂಘಟನಾ ಚತುರತೆಯಿಂದ ಚದುರಿಹೋಗಿದ್ದ ಪಕ್ಷದ ಹಳೆಯ ಕಾರ್ಯಕರ್ತರನ್ನು ಮತ್ತೆ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಪಕ್ಷಕ್ಕೆ ಹಿಂತಿರುಗುತ್ತಿದ್ದು ಮುಂದಿನ ದಿನಗಳಲ್ಲಿ ತೀರ್ಥಹಳ್ಳಿಯಲ್ಲಿ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ರಾದ ರಾಮಕೃಷ್ಣ ರವರು ಮಾತನಾಡಿ ಜೊಳ್ಳು ಕಾಳಿನಂತಹ ಕಾರ್ಯಕರ್ತರು ಪಕ್ಷ ಬಿಟ್ಟು ಹೋಗಿದ್ದು ಗಟ್ಟಿ ಕಾಳಿನಂತಹ ಕಾರ್ಯಕರ್ತರು ಪಕ್ಷದಲ್ಲಿ ಉಳಿದಿದ್ದಾರೆ ಅಂತಹ ಕಾರ್ಯಕರ್ತರನ್ನು ಬಳಸಿಕೊಂಡು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಚುನಾವಣೆ ಎದುರಿಸಬೇಕಾಗುತ್ತದೆ. ಪಕ್ಷದ ಕಾರ್ಯಕರ್ತರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸುವುದಕ್ಕೆ ಶ್ರಮಿಸಬೇಕು ಆ ಮೂಲಕ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕಿದೆ ಎಂದರು.
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಯಡೂರು ರಾಜಾರಾಮ್ ಮಾತನಾಡಿ ನನ್ನ ಪ್ರಾಮಾಣಿಕತೆಯನ್ನು ಗುರುತಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನನ್ನನ್ನು ಕರೆಸಿ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ ಆ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಅತ್ಯಂತ ಪ್ರಾಮಾಣಿಕ ಜೆಡಿಎಸ್ ಕಾರ್ಯಕರ್ತರನ್ನು ಸಂಘಟಿಸಿ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದ್ದೇನೆ,ರಾಜಕೀಯ ಮಾಡಿದರೆ ಜೆಡಿಎಸ್ ಪಕ್ಷದಲ್ಲೇ ಹೊರತು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಅಂತಹ ಸನ್ನಿವೇಶ ಸೃಷ್ಟಿಯಾದರೆ ರಾಜಕೀಯ ನಿವೃತ್ತಿಗೊಂಡು ಕೃಷಿ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಪ್ರಮಾಣ ಮಾಡುತ್ತೇನೆ ಎಂದು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸನಗರ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಎನ್ ವರ್ತೇಶ್ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ತ್ರಿಣಿವೆ ಜಯರಾಮ್ ಶೆಟ್ಟಿ,ನಿವೃತ್ತ ಯೋಧ ನಿಲ್ಸ್ ಕಲ್ ರಾಮಣ್ಣ, ಫಾರೂಖ್ ಹೊಸನಗರ ರವರುಗಳನ್ನು ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್ ಹಾಗೂ ಮುಖಂಡರು ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳಾದ ಕಲ್ಲೂರು ಮೇಘರಾಜ್, ಸುಮತಿ ಆರ್ ಪೂಜಾರಿ, ಆರ್ ಎನ್ ಮಂಜುನಾಥ್, ಜಿಎಸ್ ವರದರಾಜ್,ಚಂದ್ರಣ್ಣ ,ಯೂಸುಫ್ ಸಾಬ್,ಕಲ್ಲೂರು ಈರಣ್ಣ,ಲಕ್ಷ್ಮಿ ಬಟ್ಟೆಮಲ್ಲಪ್ಪ,ಮುಡುಬಾ ಧರ್ಮಪ್ಪ,ಜಯನಗರ ವಾಸಪ್ಪ,ಷಣ್ಮುಖಸೇರಿದಂತೆ ಅನೇಕರು ಉಪಸ್ಥಿತರಿದ್ದರು.