ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ಜೀಪ್ ಜಂಕ್ಷನ್ ಬಳಿ ಅಪಘಾತಕ್ಕೀಡಾಗಿದೆ.
ಭದ್ರಾವತಿ ಜಂಕ್ಷನ್ ಬಳಿ ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು.
ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.