ಬೆಂಗಳೂರಿನಲ್ಲಿ ಜುಲೈ30 ರಂದು ನಡೆದ ಮಾವಿನ್ ಪ್ಲಸ್ ಇಂಡಿಯಾ ಬ್ಯೂಟಿ ಪೆಜೆನ್ಟ್ ಅಡಿಷನ್ ನಲ್ಲಿ ಹೊಸನಗರದ ಜೆಸಿಐ ಕೊಡಚಾದ್ರಿ ಅಧ್ಯಕ್ಷೆ ಸೀಮಾ ಶೆರಾವೊ ನ್ಯಾಷನಲ್ ಬ್ಯೂಟಿ ಪೆಜೆನ್ಟ್ ಗೆ ಆಯ್ಕೆಯಾಗಿದ್ದು, ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ.
ನ್ಯಾಶನಲ್ ಬ್ಯೂಟಿ ಪೆಜೆನ್ಟ್ ಸೆ.22 ರಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದ್ದು ಸೀಮಾ ಶೆರಾವೊ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ.
ಹೊಸನಗರದ ಸೀಮಾ 11 ವರ್ಷದಿಂದ ಹೊಸನಗರದ ಸಿಯಂಟೋ ಬ್ಯೂಟಿ ಸಲೂನ್ ನಡೆಸುತ್ತಿದ್ದು, 20 -22ರ ಜೆಸಿಐ ಹೊಸನಗರ ಕೊಡಚಾದ್ರಿಯ ಪ್ರಥಮ ಮಹಿಳಾ ಅಧ್ಯಕ್ಷರಾಗಿ ಕೂಡ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದಾರೆ. ಬ್ಯೂಟಿಷನ್ ಅಸೋಸಿಯೇಷನ್ ಹೊಸನಗರದ ಮೊದಲ ಅಧ್ಯಕ್ಷರು ಹಾಗೂ ಸ್ಥಾಪಕ ಅಧ್ಯಕ್ಷರಾಗಿ ಕೂಡ ತೊಡಗಿಸಿಕೊಂಡಿದ್ದಾರೆ.
ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ ಹೊಸನಗರ ತಾಲೂಕಿನ ಅಧ್ಯಕ್ಷರಾಗಿರುವ ಸೀಮಾ ಇದೀಗ ಕರ್ನಾಟಕ ರಾಜ್ಯದಿಂದ ನ್ಯಾಶನಲ್ ಬ್ಯೂಟಿ ಸ್ಪರ್ಧೆಗೆ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್