ಶಿವಮೊಗ್ಗ: ನನ್ನ ನಿವಾಸದ ಮೇಲೆ ಮುತ್ತಿಗೆ ಹಾಕಿದವರು ನಮ್ಮವರೇ.ಬೆಂಗಳೂರಿನ ಮನೆಯ ಯಾವುದೇ ಗೇಟ್ ಕ್ಲೋಸ್ ಮಾಡಿರಲಿಲ್ಲ. ಹೆಚ್ಚಿನ ಭದ್ರತೆಯಿರಲಿಲ್ಲ. ಭದ್ರತಾ ಲೋಪ ಆಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಅಸಮರ್ಥ ನಾಯಕರು ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೀಡುವ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಎಷ್ಟು ಮಂದಿ ಕೊಲೆಯಾಗಿತ್ತು..? ಅಂದು ಇಡೀ ಪೊಲೀಸ್ ಇಲಾಖೆಯನ್ನು ಕೆಂಪಯ್ಯ ಹಿಡಿತಕ್ಕೆ ನೀಡಲಾಗಿತ್ತು. ಪೊಲೀಸರು ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದರು. ಹೀಗಿರುವಾಗ ಸಿದ್ದರಾಮಯ್ಯ ನನ್ನನ್ನು ಅಸಮರ್ಥ ಎನ್ನುತ್ತಾರೆ. ಸಿದ್ದರಾಮಯ್ಯ ಅವರು ಅಸಮರ್ಥರಾಗಿದ್ದರಿಂದಲೇ ಅವರ ಕ್ಷೇತ್ರದಲ್ಲಿ ಅವರೇ ಸೋತಿದ್ದು ಎಂದರು.
ಬೆಂಗಳೂರಿನ ನನ್ನ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಎಂದು ಹೇಳಿಕೊಂಡ ಕೆಲವರು ಪ್ರತಿಭಟನೆ ಮಾಡಿದ್ದಾರೆ. ಆ ಬಗ್ಗೆ ಗಮನ ಹರಿಸುವಂತೆ ನಾನು ಪೊಲೀಸರರಿಗೆ ಹೇಳಿದ್ದೇನೆ. ಅವರು ಎಬಿವಿಪಿ ಕಾರ್ಯಕರ್ತರೇ ಆಗಿದ್ದರೆ, ನಾನು ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ. ಸರ್ಕಾರ ನಿಮ್ಮ ಭಾವನೆಯನ್ನು ಅರ್ಥ ಮಾಡಿಕೊಳ್ಳುತ್ತದೆ. ನಾವು ಸಾಕಷ್ಟು ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆ.. ನಮಗೆ ನಮ್ಮದೇ ಆದ ಕಾರಣ ಇದೆ.
ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ. ಅವರ ಕಾಲದಲ್ಲಿ ಪೊಲೀಸರು ಧರಣಿ ನಡೆಸಿದರು. ನಾನು ಅವರ ಹಿರಿತನವನ್ನು ಗೌರವಿಸುತ್ತೇನೆ. ಅವರ ಕಾಲದಲ್ಲಿ ಪೊಲೀಸ್ ಇಲಾಖೆ ಕೆಂಪಯ್ಯ ಕೈಯಲ್ಲಿತ್ತು. ಅವರ ಕಾಲದಲ್ಲಿ ಒಟ್ಟು 32 ಕೊಲೆಗಳಾಗಿತ್ತು. ನಾನು ಸಮರ್ಥವಾಗಿ ಇಲಾಖೆಯನ್ನು ನಿಭಾಯಿಸಿದ್ದೇನೆ. ಸಚಿವನಾದ ಬಳಿಕ ಪ್ರತಿ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಿದ್ದೇನೆ. ಮಂಗಳೂರಿನ ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಶಾಂತಿ ಸಭೆ ನಡೆಯುತ್ತಿದೆ. ಪೊಲೀಸರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್