ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ಇಬ್ಬರನು ಅಮಾನತುಗೊಳಿಸಿ ಆದೇಶ | SMG
ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಚಂದ್ರಶೇಖರ್ ಆತ್ಮಹತ್ಯೆಗೆ ಮೂರು ಜನ ಕಾರಣರೂ ಎಂದು ಡೆತ್ ನೋಟ್ ಬರೆದು ಸಾವನ್ನಪ್ಪಿದ್ದರು .
ಡೆತ್ ನೋಟ್ ನಲ್ಲಿ ಲೆಕ್ಕಾಧಿಕಾರಿ ಪರುಶುರಾಮ್ ಹಾಗೂ ಎಂಡಿ ಜೆ ಜೆ ಪದ್ಮನಾಭ ಅವರುಗಳ ಹೆಸರು ಕೂಡ ಇತ್ತು ಇದೀಗ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರ್ಕಾರ ಎಂ ಡಿ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಸಚಿವ ನಾಗೇಂದ್ರ ಅವರು ಇದರಲ್ಲಿ ಯಾರನ್ನು ರಕ್ಷಣೆ ಮಾಡುವ ಉದ್ದೇಶ ನಮಗೆ ಇಲ್ಲ ಈಗಾಗಲೇ ಅಧಿಕಾರಿಗಳು 88 ಕೋಟಿ ಹಣವನ್ನು ವಾಪಸ್ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಶಿವಮೊಗ್ಗ ಹಾಗೂ ಬೆಂಗಳೂರಿನಲ್ಲಿ ತನಿಖೆ ನಡೆಸುತ್ತಿದ್ದು ಶಿವಮೊಗ್ಗದ ವಿನೋದ್ ನಗರದ ಚಂದ್ರಶೇಖರ್ ಗೃಹದಲ್ಲಿ ಇಂದು ಸುಮಾರು ಮೂರರಿಂದ ನಾಲ್ಕು ತಾಸುಗಳ ತನಕ ತನಿಖೆ ನಡೆಸಿದ್ದಾರೆ ಹಾಗೆ ಪುನಹ ತನಿಖೆ ಮುಂದುವರಿಸುವ ಸಾಧ್ಯತೆ ಕೂಡ ಇದೆ.
ಬ್ಯಾಂಕ್ ಅಧಿಕಾರಿಗಳ ವಿರುದ್ಧ ಬಿತ್ತು ಎಫ್ಐಆರ್ ..!?
ಈ ಪ್ರಕರಣದಲ್ಲಿ ಬ್ಯಾಂಕ್ ಅಧಿಕಾರಿಗಳ ವಿರುದ್ಧವು ಗಂಭೀರ ಆರೋಪಗಳು ಕೇಳಿ ಬರುತ್ತಿದ್ದು ಅವರನ್ನು ಕೂಡ ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಅವರ ವಿರುದ್ಧ ಕೂಡ ಎಫ್ ಆರ್ ದಾಖಲಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್