ರಿಪ್ಪನ್‌ಪೇಟೆ : ವಿಷ ಸೇವಿಸಿ ಗೃಹಣಿ ಆತ್ಮಹತ್ಯೆ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ನಿವಾಸಿ ರಫೀಕ್‌ ಎಂಬುವವರ ಪತ್ನಿ ಬುಶೀರಾ (33) ಜೀವನದಲ್ಲಿ ಜಿಗುಪ್ಸೆಗೊಂಡು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಶುಕ್ರವಾರ ಬೆಳಿಗ್ಗೆ ಖಿನ್ನತೆಗೆ ಒಳಗಾದ ಅವರು ಮನೆಯಲ್ಲಿ ಯಾರು ಇಲ್ಲದೆ ವೇಳೆ ಮನೆಯ ಸುತ್ತಾಮುತ್ತ ಬೆಳೆದಿದ್ದ ಕಳೆ ತೆಗೆಯಲು ತಂದಿಟ್ಟಿದ್ದ ಕಳೆನಾಶಕ ಸೇವಿಸಿದ್ದಾರೆ ಎನ್ನಲಾಗಿದೆ.  

ತಕ್ಷಣವೇ ಅವರನ್ನು ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಿದರೂ, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಾವನ್ನಪ್ಪಿದ್ದಾರೆ.

ಮೃತರಿಗೆ ‍ಪತಿ, ಪುತ್ರ ಹಾಗೂ ಮೂವರು ಪುತ್ರಿಯರು ಇದ್ದಾರೆ. 

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *